ADVERTISEMENT

ಪರಿಹಾರಕ್ಕೆ ₹5000 ಕೋಟಿ ನೆರವು ಬೇಕಿದೆ, ದಾನಿಗಳು ಸಹಕರಿಸಿ: ಯಡಿಯೂರಪ್ಪ ಮನವಿ

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2019, 16:05 IST
Last Updated 8 ಆಗಸ್ಟ್ 2019, 16:05 IST
ಬಿ.ಎಸ್‌.ಯಡಿಯೂರಪ್ಪ
ಬಿ.ಎಸ್‌.ಯಡಿಯೂರಪ್ಪ    

ಬೆಳಗಾವಿ:ಪ್ರವಾಹ ಪೀಡಿತ ಜಿಲ್ಲೆಗಳಾದ ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ಕೊಡಗು, ರಾಯಚೂರು, ಯಾದಗಿರಿಯಲ್ಲಿ ಆಪಾರ ಪ್ರಮಾಣದ ಆಸ್ತಿಪಾಸ್ತಿ ಹಾನಿಯಾಗಿದೆ. ಸಂಕಷ್ಟಕ್ಕೆ ಸಿಲುಕಿರುವವರ ನೆರವಿಗಾಗಿ ದಾನಿಗಳು ಮುಂದೆ ಬರಬೇಕು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮನವಿ ಮಾಡಿದರು.

ಪ್ರವಾಹ ವೀಕ್ಷಣೆ ಬಳಿಕ ಸುದ್ದಿಗಾರರೊಂದಿ‌ಗೆ ಮಾತನಾಡಿದ ಅವರು, ‘ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸುಮಾರು 30 ಸಾವಿರ ಮನೆಗಳನ್ನು ನಿರ್ಮಾಣ ಮಾಡಬೇಕಿದೆ. ಜತೆಗೆ, ಪರಿಹಾರ ಕಾರ್ಯಗಳಿಗೆ ₹5000 ಕೋಟಿ ನೆರವಿನ ಅಗತ್ಯವಿದೆ ಎಂದು ತಿಳಿಸಿದರು.

ಕಾರ್ಯಾಚರಣೆಗೆ ಬೇಕಾದ ದೋಣಿ, ಹೆಲಿಕಾಪ್ಟರ್‌ಗಳನ್ನು ಹೆಚ್ಚಿನ ಪ್ರಮಾಣಗಳಲ್ಲಿ ಬಳಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಪರಿಹಾರ ಶಿಬಿರಗಳಲ್ಲಿ ಯಾವುದೇ ರೀತಿಯ ಸಮಸ್ಯೆ ಇಲ್ಲ ಎಂದರು.

ADVERTISEMENT

ನಾನು ಇನ್ನೂ ಮೂರು ದಿನಗಳ ಕಾಲ ಇಲ್ಲೇ ಇದ್ದು, ಪರಿಸ್ಥಿತಿಯನ್ನು ಅವಲೋಕಿಸುತ್ತೇನೆ ಎಂದು ತಿಳಿಸಿದರು.

ಸಚಿವ ಸಂಪುಟ ವಿಸ್ತರಣೆ ಕುರಿತು ಪ್ರತಿಕ್ರಿಯಿಸಲು ಅವರು ನಿರಾಕರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.