ADVERTISEMENT

91.19 ಲಕ್ಷ ಕುಟುಂಬಗಳಿಗೆ 55 ಎಲ್‌ಪಿಸಿಡಿ ಶುದ್ಧ ನೀರು: ಬಿಎಸ್‌ವೈ

ರಾಜ್ಯದ ಗುರಿ ಎಂದ ಮುಖ್ಯಮಂತ್ರಿ ಬಿಎಸ್‌ವೈ

​ಪ್ರಜಾವಾಣಿ ವಾರ್ತೆ
Published 13 ಜುಲೈ 2021, 19:30 IST
Last Updated 13 ಜುಲೈ 2021, 19:30 IST
ಜಲಜೀವನ್‌ ಮಿಷನ್‌ ಪ್ರಗತಿ ಪರಿಶೀಲನಾ ಸಭೆ ಬಳಿಕ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ರಾಜ್ಯದ ನೀರಾವರಿ ಯೋಜನೆಗಳ ಕುರಿತು ಮನವಿಯೊಂದನ್ನು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ನೀಡಿದರು. ಸಚಿವರಾದ ಬಸವರಾಜಬೊಮ್ಮಾಯಿ ಮತ್ತು ಜೆ.ಸಿ.ಮಾಧುಸ್ವಾಮಿ ಇದ್ದರು.
ಜಲಜೀವನ್‌ ಮಿಷನ್‌ ಪ್ರಗತಿ ಪರಿಶೀಲನಾ ಸಭೆ ಬಳಿಕ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ರಾಜ್ಯದ ನೀರಾವರಿ ಯೋಜನೆಗಳ ಕುರಿತು ಮನವಿಯೊಂದನ್ನು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ನೀಡಿದರು. ಸಚಿವರಾದ ಬಸವರಾಜಬೊಮ್ಮಾಯಿ ಮತ್ತು ಜೆ.ಸಿ.ಮಾಧುಸ್ವಾಮಿ ಇದ್ದರು.   

ಬೆಂಗಳೂರು: ‘ರಾಜ್ಯದಲ್ಲಿ 91.19 ಲಕ್ಷ ಗ್ರಾಮೀಣ ಕುಟುಂಬಗಳಿಗೆ 55 ಎಲ್‌ಪಿಸಿಡಿ (ಒಬ್ಬ ವ್ಯಕ್ತಿಗೆ ಒಂದು ದಿನಕ್ಕೆ ಪೂರೈಸುವ ತಲಾ ಲೀಟರ್‌) ಶುದ್ಧ ನೀರು ಒದಗಿಸುವ ಗುರಿ ಇದೆ’ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ವಿಧಾನಸೌಧದಲ್ಲಿ ಮಂಗಳವಾರ ನಡೆದ ಜಲಜೀವನ್ ಮಿಷನ್‌ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್‌ ಶೆಖಾವತ್‌ ಅವರಿಗೆ ಈ ಮಾಹಿತಿ ನೀಡಿದರು.

ಈ ಯೋಜನೆಯಡಿ ಈ ಸಾಲಿನಲ್ಲಿ 25.17 ಲಕ್ಷ ಮನೆಗಳಿಗೆ ನಲ್ಲಿ ನೀರಿನ ಸಂಪರ್ಕ ಒದಗಿಸಸಲು ಉದ್ದೇಶಿಸಲಾಗಿದೆ. ಅದೇ ರೀತಿ 2022–23 ನೇ ಸಾಲಿನಲ್ಲಿ 27.15 ಲಕ್ಷ ಮತ್ತು 2023 ಡಿಸೆಂಬರ್‌ ಅಂತ್ಯದ ವೇಳೆಗೆ 10.72 ಲಕ್ಷ ಮನೆಗಳಿಗೆ ನಲ್ಲಿ ನೀರಿನ ಸಂಪರ್ಕ ಒದಗಿಸುವ ಗುರಿ ಹೊಂದಲಾಗಿದ ಎಂದು ವಿವರಿಸಿದರು.

ADVERTISEMENT

ಆದ್ಯತಾ ಜಿಲ್ಲೆಗಳಾದ ರಾಯಚೂರು ಜಿಲ್ಲೆಗೆ ₹2000 ಕೋಟಿ ವೆಚ್ಚದಲ್ಲಿ ಬಹುಗ್ರಾಮ ಯೋಜನೆ ರೂಪಿಸಲಾಗಿದೆ. ಇದಕ್ಕೆ ಸಚಿವ ಸಂಪುಟ ಅನುಮೋದನೆ ನೀಡಲಾಗಿದೆ. ಇದಕ್ಕೆ ಶೀಘ್ರವೇ ಟೆಂಡರ್‌ ಪ್ರಕ್ರಿಯೆ ಆರಂಭಿಸಲಾಗಿದೆ. ಯಾದಗಿರಿ ಜಿಲ್ಲೆಯಲ್ಲಿಯೂ ಬಹುಗ್ರಾಮ ಯೋಜನೆ ರೂಪಿಸಲಾಗುತ್ತಿದೆ ಎಂದು ಯಡಿಯೂರಪ್ಪ ಹೇಳಿದರು.

ಕೇಂದ್ರ ಸಚಿವ ಗಜೇಂದ್ರ ಸಿಂಗ್‌ ಮಾತನಾಡಿ, ಕರ್ನಾಟಕದ ಜಲಜೀವನ್‌ ಮಿಷನ್‌ ಕಾರ್ಯಕ್ರಮವನ್ನು ನಿಗದಿತ ಅವಧಿಯೊಳಗೇ ಪೂರ್ಣಗೊಳಿಸಬೇಕು ಎಂದು ಸಲಹೆ ನೀಡಿದರು.

ಜಲಜೀವನ್‌ ಮಿಷನ್‌ ಯೋಜನೆಯಡಿ 2024ರ ವೇಳೆಗೆ ದೇಶದ 18.93 ಕೋಟಿ ಗ್ರಾಮೀಣ ಮನೆಗಳಲ್ಲಿ 15.70 ಕೋಟಿ ಮನೆಗಳಿಗೆ ನಲ್ಲಿ ನೀರಿನ ಸಂಪರ್ಕ ನೀಡುವ ಗುರಿ ಹೊಂದಲಾಗಿದೆ. ಕೇವಲ ನಲ್ಲಿ ಸಂಪರ್ಕ ಕೊಡುವುದು ಮಾತ್ರವಲ್ಲದೆ, ನಿರಂತರವಾಗಿ ಕುಡಿಯುವ ನೀರು ಪೂರೈಸುವ ಬಗ್ಗೆ ಗಮನ ಹರಿಸಲಾಗುವುದು ಎಂದು ಸಚಿವರು ತಿಳಿಸಿದರು.

ಸಭೆಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.