ADVERTISEMENT

ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಮುಖ್ಯಮಂತ್ರಿ ಆದೇಶ

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2020, 7:48 IST
Last Updated 17 ನವೆಂಬರ್ 2020, 7:48 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   
""

ಬೆಂಗಳೂರು: ವೀರಶೈವ– ಲಿಂಗಾಯತ ಸಮುದಾಯದ ಹಿಂದುಳಿದವರ ಅಭಿವೃದ್ಧಿಗಾಗಿ ‘ಕರ್ನಾಟಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ’ ರಚನೆಗೆ ಕರ್ನಾಟಕ ಸರ್ಕಾರ ಮಂಗಳವಾರ ಆದೇಶಿಸಿದೆ.

ಈ ಕುರಿತು ಮುಖ್ಯಮಂತ್ರಿಗಳ ಗೃಹ ಕಚೇರಿಯಿಂದ ಪ್ರಕಟಣೆ ಹೊರಡಿಸಲಾಗಿದೆ.

‘ರಾಜ್ಯದಲ್ಲಿ ವೀರಶೈವ– ಲಿಂಗಾಯತ ಸಮಾಜದ ಜನಾಂಗದವರು ಅತಿ ಹೆಚ್ಚಿನ ಸಂಖ್ಯೆಯಲ್ಲಿದ್ದು, ಇವರಲ್ಲಿ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದವರಿದ್ದಾರೆ. ಈ ಸಮಾಜದ ಸರ್ವತೋಮುಖ ಅಭಿವೃದ್ಧಿಗಾಗಿ ಕರ್ನಾಟಕ ವೀರಶೈವ– ಲಿಂಗಾಯತ ಅಭಿವೃದ್ಧಿ ನಿಗಮವನ್ನು ಸ್ಥಾಪಿಸುವುದು ಅಗತ್ಯವಿರುವುದರಿಂದ ತಕ್ಷಣದಿಂದ ಜಾರಿಗೆ ಬರುವಂತೆ ನಿಗಮವನ್ನು ಸ್ಥಾಪನೆ ಮಾಡಲು ಆದೇಶಿಸಲಾಗಿದೆ’ ಎಂದು ಪ್ರಕಟಣೆಯಲ್ಲಿ ವಿವರಿಸಲಾಗಿದೆ.

ADVERTISEMENT
ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಪ್ರತಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.