ADVERTISEMENT

ಬೆಳಗಾವಿ: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಆರಂಭ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2020, 6:47 IST
Last Updated 5 ಡಿಸೆಂಬರ್ 2020, 6:47 IST
 ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸಿದರು.
ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸಿದರು.    
""

ಬೆಳಗಾವಿ: ಇಲ್ಲಿನ ಗಾಂಧಿ ಭವನದಲ್ಲಿ ಆಯೋಜಿಸಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಆರಂಭ.

ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ, ಸಚಿವರಾದ ಕೆ.ಎಸ್. ಈಶ್ವರಪ್ಪ, ಜಗದೀಶ ಶೆಟ್ಟರ್, ರಮೇಶ್ ಜಾರಕಿಹೊಳಿ, ಆರ್. ಅಶೋಕ್,
ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ, ರಾಜ್ಯ ಘಟಕದ ಉಪಾಧ್ಯಕ್ಷ ಅರವಿಂದ ಲಿಂಬಾವಳಿ, ನಗರ ಘಟಕದ ಅಧ್ಯಕ್ಷ ಶಶಿಕಾಂತ ಪಾಟೀಲ, ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ ಇದ್ದರು.

ಕನ್ನಡಪರ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ಕಾರ್ಯಕಾರಿಣಿಗೆ ಮುತ್ತಿಗೆ ಯತ್ನ: ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಪೊಲೀಸರ ವಶಕ್ಕೆ
ಬೆಳಗಾವಿ:
ಮರಾಠಾ ಅಭಿವೃದ್ಧಿ ನಿಗಮ ಸ್ಥಾಪನೆ ಖಂಡಿಸಿ ವಿವಿಧ ಕನ್ನಡ ಪರ ಸಂಘಟನೆಗಳಿಂದ ಕರೆ ನೀಡಲಾಗಿರುವ ಕರ್ನಾಟಕ ಬಂದ್ ಬೆಂಬಲಿಸಿ ಕನ್ನಡಪರ ಕಾರ್ಯಕರ್ತರು ಶನಿವಾರ ಪ್ರತಿಭಟನೆ‌ ನಡೆಸಿದರು.

ADVERTISEMENT

ಗಾಂಧಿ ಭವನದಲ್ಲಿ ನಡೆದಿರುವ ಬಿಜೆಪಿ ರಾಜ್ಯ ಕಾರ್ಯಕಾರಣಿಗೆ ಮುತ್ತಿಗೆ ಹಾಕಲು ಹೊರಟ್ಟಿದ್ದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.