ಬೆಂಗಳೂರು: ‘ಸಂಪುಟ ವಿಸ್ತರಣೆಯೂ ಸೇರಿದಂತೆ ಹಲವು ವಿಷಯಗಳ ಕುರಿತು ರಾಷ್ಟ್ರೀಯ ನಾಯಕರ ಜೊತೆ ಚರ್ಚಿಸಲು ದೆಹಲಿಗೆ ಹೋಗುತ್ತಿದ್ದೇನೆ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಭಾನುವಾರ ಬೆಳಿಗ್ಗೆ ದೆಹಲಿಗೆ ಹೊರಡುವ ಮೊದಲು ಸುದ್ದಿಗಾರ ಜೊತೆ ಯಡಿಯೂರಪ್ಪ ಮಾತನಾಡಿದರು.
‘ಸಂಪುಟ ವಿಸ್ತರಣೆ ಈ ವಾರ ಆಗುತ್ತದೆಯೇ’ ಎಂದು ಕೇಳಿದ ಪ್ರಶ್ನೆಗೆ, ‘ಗೊತ್ತಿಲ್ಲಪ್ಪ. ನಾನು ಎಲ್ಲ ವಿಷಯವನ್ನು ನಾಯಕರ ಜೊತೆ ಚರ್ಚೆ ಮಾಡುತ್ತೇನೆ’ ಎಂದರು.
‘ಉಪ ಚುನಾವಣೆಗೆ ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಯಾರು ಅಭ್ಯರ್ಥಿ ಯಾರಾಗಬೇಕು ಎಂಬ ಬಗ್ಗೆ ಒಂದಷ್ಟು ಚರ್ಚೆ ಮಾಡುವುದು, ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಪಡೆದ ಗೆಲುವಿನ ಬಗ್ಗೆ ಮಾಹಿತಿ ನೀಡುವಂಥದ್ದು ಸೇರಿದಂತೆ ಹಲವು ವಿಷಯಗಳ ಬಗ್ಗೆ ಪಕ್ಷ ದ ಹಿರಿಯ ನಾಯಕರ ಜೊತೆ ಚರ್ಚಿಸಿ, ರಾತ್ರಿ ವಾಪಾಸು ಬರಲು ಹೋಗುತ್ತಿದ್ದೇನೆ’ ಎಂದೂ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.