ADVERTISEMENT

ಲಾಕ್‌ಡೌನ್ ವಿಸ್ತರಿಸುವಂತೆ ತಜ್ಞರು ವರದಿ ನೀಡಿಲ್ಲ: ಮುಖ್ಯಮಂತ್ರಿ

​ಪ್ರಜಾವಾಣಿ ವಾರ್ತೆ
Published 30 ಮೇ 2021, 6:22 IST
Last Updated 30 ಮೇ 2021, 6:22 IST
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ   

ಬೆಂಗಳೂರು: 'ರಾಜ್ಯದಲ್ಲಿ ಜೂನ್ 7ರ ನಂತರವೂ ಲಾಕ್‌ಡೌನ್ವಿಸ್ತರಿಸುವ ಕುರಿತು ಯಾವುದೇ ತೀರ್ಮಾನ ಮಾಡಿಲ್ಲ' ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಸುದ್ದಿಗಾರರ ಜೊತೆ ಭಾನುವಾರ ಮಾತನಾಡಿದ ಅವರು, 'ಲಾಕ್‌ಡೌನ್ ವಿಸ್ತರಿಸುವಂತೆ ತಜ್ಞರು ವರದಿ ನೀಡಿಲ್ಲ' ಎಂದು ಸ್ಪಷ್ಟಪಡಿಸಿದರು.

'ಜೂನ್ 5 ಅಥವಾ 6ರಂದು ಪರಿಸ್ಥಿತಿ ಅವಲೋಕಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು. ಜನ ಸಹಕರಿಸಿದರೆ ಲಾಕ್‌ಡೌನ್ ವಿಸ್ತರಿಸುವ ಅಗತ್ಯವಿಲ್ಲ' ಎಂದರು.

ADVERTISEMENT

'ಕೆಲವು ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಕಡಿಮೆಯಾಗಿಲ್ಲ. ಈ ಬಗ್ಗೆ ತಜ್ಞರು, ಸಚಿವರ ಜತೆ‌ ಸಮಾಲೋಚನೆ ನಡೆಸಿದ ಬಳಿಕ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು' ಎಂದೂ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.