ಬೆಂಗಳೂರು: ‘ಕೋವಿಡ್– 19 ಸೋಂಕಿನಿಂದ ರಕ್ಷಿಸಿಕೊಳ್ಳಲು ಮತ್ತು ಇತರರಿಗೆ ಹರಡುವುದನ್ನು ತಡೆಯಲು ಎಲ್ಲರೂ ಕಡ್ಡಾಯವಾಗಿ ವ್ಯಕ್ತಿಗತ ಅಂತರ ಕಾಯ್ದುಕೊಳ್ಳಬೇಕು’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
‘ಸೋಂಕು ತಡೆಯಲು ವ್ಯಕ್ತಿಗತ ಅಂತರ ಕಾಯ್ದುಕೊಳ್ಳುವುದೇ ಏಕೈಕ ಮಾರ್ಗ. ಹೀಗಾಗಿ, ಸಚಿವರು, ಸಂಸದರು, ಶಾಸಕರು ಹಾಗೂ ಅಧಿಕಾರಿ ವರ್ಗದವರು ಕಡ್ಡಾಯವಾಗಿ ಈ ನಿಯಮ ಅನುಸರಿಸುವ ಮೂಲಕ ಇತರರಿಗೂ ಮಾದರಿ ಆಗಬೇಕು‘ ಎಂದೂ ಟ್ವೀಟ್‌ನಲ್ಲಿ ಅವರು ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.