ADVERTISEMENT

ಮಾರಡಗಿ–ಬಸವಂತಪುರ ಗ್ರೀನ್‌ಫೀಲ್ಡ್‌ ಹೆದ್ದಾರಿ: ಗಡ್ಕರಿಗೆ ಬೊಮ್ಮಾಯಿ ಧನ್ಯವಾದ‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ಮಾರ್ಚ್ 2022, 6:53 IST
Last Updated 4 ಮಾರ್ಚ್ 2022, 6:53 IST
ಬಸವರಾಜ ಬೊಮ್ಮಾಯಿ – ಸಂಗ್ರಹ ಚಿತ್ರ
ಬಸವರಾಜ ಬೊಮ್ಮಾಯಿ – ಸಂಗ್ರಹ ಚಿತ್ರ   

ಬೆಂಗಳೂರು: ರಾಜ್ಯದ ಮಾರಡಗಿ (ಎಸ್)ಆಂದೋಲಾ ಹಾಗೂ ಬಸವಂತಪುರ ಮಧ್ಯೆ ಸಂಪರ್ಕ ಕಲ್ಪಿಸುವ ಆರು ಪಥಗಳ ಗ್ರೀನ್‌ಫೀಲ್ಡ್‌ ಹೆದ್ದಾರಿಗೆ ಅನುಮೋದನೆ ನೀಡಿರುವುದಕ್ಕೆ ಕೇಂದ್ರ ರಸ್ತೆ ಸಾರಿಗೆ, ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಧನ್ಯವಾದ ಸಮರ್ಪಿಸಿದ್ದಾರೆ.

‘ಭಾರತ್ ಮಾಲಾ ಯೋಜನೆಯಡಿ ‘ರಾಷ್ಟ್ರೀಯ ಹೆದ್ದಾರಿ 150 ಸಿ’ ವ್ಯಾಪ್ತಿಯಲ್ಲಿ ಮರಡಗಿ ಹಾಗೂ ಬಸವಂತಪುರ ಮಧ್ಯೆ ಆರು ಪಥಗಳ ಗ್ರೀನ್‌ಫೀಲ್ಡ್‌ ಹೆದ್ದಾರಿಗೆ ಅನುಮೋದನೆ ನೀಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಸಚಿವ ಗಡ್ಕರಿ ಅವರಿಗೆ ಧನ್ಯವಾದಗಳು’ ಎಂದು ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

ಈ ಯೋಜನೆಯು ತಡೆರಹಿತ ಸಂಪರ್ಕ ಕಲ್ಪಿಸುವುದಲ್ಲದೆ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಕಾರಣವಾಗಲಿದೆ ಎಂದೂ ಅವರು ಉಲ್ಲೇಖಿಸಿದ್ದಾರೆ.

ADVERTISEMENT

ಗ್ರೀನ್‌ಫೀಲ್ಡ್‌ ಹೆದ್ದಾರಿಗೆ ಅನುಮೋದನೆ ನೀಡಿರುವ ಬಗ್ಗೆ ನಿತಿನ್ ಗಡ್ಕರಿ ಶುಕ್ರವಾರ ಬೆಳಿಗ್ಗೆ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.