ADVERTISEMENT

ಎಷ್ಟೇ ಅಲುಗಾಡಿಸಿದರೂ ಕುರ್ಚಿ ಭದ್ರ: ಸಿಎಂ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2024, 15:53 IST
Last Updated 10 ಆಗಸ್ಟ್ 2024, 15:53 IST
<div class="paragraphs"><p>ಕೊಳ್ಳೇಗಾಲ ತಾಲ್ಲೂಕಿನಲ್ಲಿ ಶನಿವಾರ ರಾತ್ರಿ ಭರಚುಕ್ಕಿ ಜಲಪಾತೋತ್ಸವಕ್ಕೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ</p></div>

ಕೊಳ್ಳೇಗಾಲ ತಾಲ್ಲೂಕಿನಲ್ಲಿ ಶನಿವಾರ ರಾತ್ರಿ ಭರಚುಕ್ಕಿ ಜಲಪಾತೋತ್ಸವಕ್ಕೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

   

ಕೊಳ್ಳೇಗಾಲ (ಚಾಮರಾಜನಗರ ಜಿಲ್ಲೆ): ‘ನೀವು (ಬಿಜೆಪಿ, ಜೆಡಿಎಸ್‌) ಕುರ್ಚಿಯನ್ನು ಎಷ್ಟೇ ಅಲ್ಲಾಡಿಸಿದರೂ ಜಗ್ಗುವುದಿಲ್ಲ, ಬಗ್ಗುವುದಿಲ್ಲ’ ಎಂದು ವಿರೋಧ ಪಕ್ಷಗಳ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಕೊಳ್ಳೇಗಾಲ ತಾಲ್ಲೂಕಿನಲ್ಲಿ ಶನಿವಾರ ಭರಚುಕ್ಕಿ ಜಲಪಾತೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಬಿಜೆಪಿ, ಜೆಡಿಎಸ್‌ನವರು ಕುರ್ಚಿಯನ್ನು ಅಲುಗಾಡಿದಷ್ಟೂ ಗಟ್ಟಿಯಾಗಿ ಅಧಿಕಾರ ನಡೆಸಿ ಬಡವರ, ಶೋಷಿತರ ಪರವಾಗಿ ಕಾರ್ಯಕ್ರಮ ರೂಪಿಸುತ್ತಲೇ ಇರುತ್ತೇನೆ ಎಂದರು.

ADVERTISEMENT

ಹಿಂದೆ ಚಾಮರಾಜನಗರ ಜಿಲ್ಲೆಗೆ ಕಾಲಿಟ್ಟರೆ ಅಧಿಕಾರ ಹೋಗುತ್ತದೆ ಎಂಬ ಮೂಢನಂಬಿಕೆ ಬಿತ್ತಲಾಗಿತ್ತು. ಮುಖ್ಯಮಂತ್ರಿಯಾದ ಬಳಿಕ ಹತ್ತಕ್ಕೂ ಹೆಚ್ವು ಬಾರಿ ಜಿಲ್ಲೆಗೆ ಬಂದಿದ್ದೇನೆ. ಚಾಮರಾಜನಗರಕ್ಕೆ ಬಂದಾಗಲೆಲ್ಲ ಕುರ್ಚಿ ಹೆಚ್ಚು ಗಟ್ಟಿಯಾಗಿದೆ ಎಂದರು.

ಸಿದ್ದರಾಮಯ್ಯ ಕಾಲುಗುಣದಿಂದ ರಾಜ್ಯದಲ್ಲಿ ಮಳೆ ಇಲ್ಲ ಎಂದು ದೂರಿದ್ದರು. ಈ ಬಾರಿ ಉತ್ತಮ ಮಳೆಯಾಗಿದೆ. ನನ್ನ ವಿರುದ್ಧ ಬಿತ್ತಿದ ಮೂಢನಂಬಿಕೆಯೂ ಸುಳ್ಳಾಗಿದೆ ಎಂದರು.

ಕೊಳ್ಳೇಗಾಲ ತಾಲ್ಲೂಕಿನಲ್ಲಿ ಶನಿವಾರ ರಾತ್ರಿ ಭರಚುಕ್ಕಿ ಜಲಪಾತೋತ್ಸವಕ್ಕೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.