ಕಾರ್ಮಿಕ ಸಚಿವ ಸಂತೋಷ್ ಲಾಡ್
ಬೆಳಗಾವಿ: 'ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಸಂಕಟ ಇದೆ. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬಿಜೆಪಿ ಸಚಿವರು ಅಸಮಾಧಾನಗೊಂಡಿದ್ದಾರೆ. ಹಾಗಾಗಿ ಪ್ರಧಾನಿ ಸ್ಥಾನಕ್ಕೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರನ್ನು ಬದಲಿಸಬಹುದು' ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು.
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಸೋಮವಾರ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಹೀಗೆ ಪ್ರತಿಕ್ರಿಯಿಸಿದರು.
'ಬಿಜೆಪಿ ನಾಯಕರು ಮೋದಿ ಸಾಧನೆ ಬಗ್ಗೆ ಮಾತ್ರ ಮಾತನಾಡುತ್ತಾರೆ. ಆದರೆ, ಯಾರೂ ಉಳಿದ ನಾಯಕರ ಸಾಧನೆ ಬಗ್ಗೆ ಮಾತನಾಡುತ್ತಿಲ್ಲ. ಕೇಂದ್ರದಲ್ಲಿ ಬಿಜೆಪಿಗೆ ಬಹುಮತ ಇಲ್ಲ. ಹಾಗಾಗಿ ಪ್ರಧಾನಿ ಮೋದಿ ಬದಲಾವಣೆ ಆಗಬಹುದು ಎಂಬ ಚರ್ಚೆ ಇದೆ. ಈ ಬಗ್ಗೆಯೂ ನೀವು ಕೇಳಬೇಕು' ಎಂದರು.
'11 ವರ್ಷ ವಿಶ್ವಗುರು ನೋಡಿದ್ದೇವೆ. ಅವರನ್ನು ಕೆಳಗಿಳಿಸಿ, ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಪ್ರಧಾನಿ ಮಾಡಿದರೂ ನಮ್ಮ ಅಭ್ಯಂತರವಿಲ್ಲ' ಎಂದೂ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.