ADVERTISEMENT

ಸಿಎಂ ಬದಲಾವಣೆ; ಹತ್ತೇ ಶಾಸಕರ ಮಾತು: ಸಚಿವ ರಾಮಲಿಂಗಾರೆಡ್ಡಿ

​ಪ್ರಜಾವಾಣಿ ವಾರ್ತೆ
Published 20 ಜನವರಿ 2026, 23:30 IST
Last Updated 20 ಜನವರಿ 2026, 23:30 IST
ರಾಮಲಿಂಗಾರೆಡ್ಡಿ
ರಾಮಲಿಂಗಾರೆಡ್ಡಿ   

ಬಾಗಲಕೋಟೆ: ‘ಮುಖ್ಯಮಂತ್ರಿ ಬದಲಾವಣೆ ಕುರಿತು ಮಾಧ್ಯಮಗಳ ಎದುರು ಕೇವಲ ಹತ್ತು ಶಾಸಕರು ಮಾತನಾಡುತ್ತಾರೆ. ಅವರಲ್ಲಿ ಐವರು ಮುಖ್ಯಮಂತ್ರಿ ಪರ ಇದ್ದರೆ, ಇನ್ನೂ ಐವರು ಉಪ ಮುಖ್ಯಮಂತ್ರಿ ಪರ ಇದ್ದಾರೆ’ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಮೈಕ್ ಸಿಕ್ಕ ತಕ್ಷಣ ಹೇಳಿಕೆ ನೀಡುತ್ತಾರೆ. ಇದರಿಂದ ಗೊಂದಲ ಸೃಷ್ಟಿಯಾಗಿದೆ. ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‌ಗೆ ಬಿಟ್ಟಿದ್ದು. ಅದಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ’ ಎಂದರು.

‘ಗುಜರಾತ್ ರಾಜ್ಯದಲ್ಲಿದ್ದ ವಾಹನಗಳಿಗೆ ಆರ್‌ಟಿಒ ಕಚೇರಿಯಿಂದ ಸ್ಥಳ ಪರಿಶೀಲಿಸದೇ ಫಿಟ್ನೆಸ್ ಪ್ರಮಾಣಪತ್ರ ನೀಡಿರುವ ಆರೋಪಕ್ಕೆ ಸಂಬಂಧಿಸಿದಂತೆ ತಪ್ಪು ಮಾಡಿದ್ದರೆ, ಅಂತಹ ಅಧಿಕಾರಿಗಳನ್ನು ಅಮಾನತು ಮಾಡಲಾಗುವುದು’ ಎಂದರು.

ADVERTISEMENT

‘ಈ ಸಂಬಂಅ ಗುಜರಾತ್ ಆಯುಕ್ತರಿಗೆ ನಮ್ಮ ಆಯುಕ್ತರು ಪತ್ರ ಬರೆದಿದ್ದಾರೆ. ಬಗ್ಗೆ ತನಿಖೆ ಮಾಡಿ ವರದಿ ಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.