ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಸೋಮವಾರ ರಾತ್ರಿ ಔತಣಕೂಟ ಆಯೋಜಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ, ಕುರ್ಚಿ ಉಳಿಸಿಕೊಳ್ಳಲು ಡಿನ್ನರ್ ಮೀಟಿಂಗ್ ನಾಟಕವಾಡುವ ಸಿಎಂ ಸಿದ್ದರಾಮಯ್ಯ ಅವರೇ, ತಮ್ಮದೇ ಸರ್ಕಾರ ಸೃಷ್ಟಿಸಿರುವ ಸಮಸ್ಯೆಗಳ ಕುರಿತು ಚರ್ಚಿಸುವುದಕ್ಕೂ ಒಂದಷ್ಟು ಸಮಯ ಮೀಸಲಿಡಿ. ಸ್ವಾರ್ಥವನ್ನು ಬದಿಗಿಟ್ಟು ಸಮಸ್ಯೆಗಳಿಗೆ ಪರಿಹಾರ ನೀಡಿ ಎಂದು ಆಗ್ರಹಿಸಿದೆ.
ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಜ್ಯ ಬಿಜೆಪಿ ಘಟಕ, ಗದ್ದುಗೆಗಾಗಿ ಹಗಲಿರುಳು ಚಿಂತಿಸುವ ಸಿಎಂ ಸಿದ್ದರಾಮಯ್ಯನವರೇ
ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವ ಕುರಿತು ಚರ್ಚಿಸುವುದು ಯಾವಾಗ?
ಈರುಳ್ಳಿ, ಮೆಕ್ಕೆಜೋಳ ಬೆಲೆ ಕುಸಿದು ರೈತರಿಗೆ ಸಮಸ್ಯೆ ಆಗಿದೆ ಚರ್ಚಿಸುವುದು ಯಾವಾಗ?
ರಸ್ತೆಗುಂಡಿ ಸಮಸ್ಯೆ ಕುರಿತು ಚರ್ಚಿಸುವುದು ಯಾವಾಗ?
ರಾಜ್ಯದಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಾಗಿವೆ ಚರ್ಚಿಸುವುದು ಯಾವಾಗ?
ವಿದ್ಯಾರ್ಥಿಗಳಿಗೆ ಬಸ್ ಸಮಸ್ಯೆ ಆಗುತ್ತಿದೆ ಚರ್ಚಿಸುವುದು ಯಾವಾಗ?
ರಾಜ್ಯ ಅಭಿವೃದ್ಧಿ ಶೂನ್ಯವಾಗಿದೆ ಚರ್ಚಿಸುವುದು ಯಾವಾಗ? ಎಂದು ಪ್ರಶ್ನಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಸೋಮವಾರ ರಾತ್ರಿ ಔತಣಕೂಟ ಆಯೋಜಿಸಿರುವುದು ತೀವ್ರ ಕುತೂಹಲ ಮೂಡಿಸಿದೆ. ಸಿದ್ದರಾಮಯ್ಯ ಅವರ ಸರ್ಕಾರಿ ನಿವಾಸ 'ಕಾವೇರಿ'ಯಲ್ಲಿ ಈ ಔತಣಕೂಟ ಆಯೋಜಿಸಲಾಗಿದೆ.
ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ನವೆಂಬರ್ ಗೆ ಎರಡೂವರೆ ವರ್ಷ ತುಂಬುಲಿದ್ದು,, ನಾಯಕತ್ವ ಬದಲಾವಣೆ, ಸಂಪುಟ ಪುನರ್ ರಚನೆಯ ಮಾತು ಜೋರಾಗಿದೆ. ಈ ನಡುವೆ ಮುಖ್ಯಮಂತ್ರಿ ಔತಣ ಕೂಟ ಆಯೋಜಿಸಿರುವುದು ನಾನಾ ರಾಜಕೀಯ ವ್ಯಾಖ್ಯಾನಗಳಿಗೆ ಕಾರಣವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.