ADVERTISEMENT

ಬಿಡದಿಯ ಟೊಯೊಟಾ ಕಿರ್ಲೋಸ್ಕರ್ ವಿವಾದ ಬಗೆಹರಿಸಲು ಸಿಎಂ ಸೂಚನೆ

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2020, 8:17 IST
Last Updated 17 ನವೆಂಬರ್ 2020, 8:17 IST
ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ    

ಬೆಂಗಳೂರು: ಟೊಯೊಟಾ ಕ್ರಿರ್ಲೋಸ್ಕರ್‌ ಕಂಪನಿಯಲ್ಲಿ ಉಂಟಾಗಿರುವ ಸಮಸ್ಯೆ ಬಗೆಹರಿಸಲು ಸಂಬಂಧಪಟ್ಟ ಸಚಿವರಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಮಂಗಳವಾರ ತಿಳಿಸಿದ್ದಾರೆ.

'ಬಿಡದಿಯಲ್ಲಿರುವ ಟೊಯೋಟಾ ಕಿರ್ಲೋಸ್ಕರ್ ಕಂಪನಿಯಲ್ಲಿ ಉಂಟಾಗಿರುವ ಸಮಸ್ಯೆ ನನ್ನ ಗಮನಕ್ಕೆ ಬಂದಿದೆ. ಸಂಸ್ಥೆಯ ಕಾರ್ಮಿಕರು ಮತ್ತು ಆಡಳಿತ ಮಂಡಳಿಯ ಜೊತೆ ಚರ್ಚಿಸಿ, ಆದಷ್ಟು ಶ್ರೀಘ್ರದಲ್ಲಿ ಸಮಸ್ಯೆಯನ್ನು ಪರಿಹರಿಸುವಂತೆ ಸಂಬಂಧಪಟ್ಟ ಸಚಿವರಿಗೆ ಸೂಚನೆ ನೀಡಲಾಗಿದೆ' ಎಂದು ಹೇಳಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿಯು ಟ್ವೀಟ್‌ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.