
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್ 6ರಂದು ಹಾಸನ ಜಿಲ್ಲೆಗೆ ಭೇಟಿ ನೀಡಲಿದ್ದು, ಆ ವೇಳೆ ವಿವಿಧ ಕಾರ್ಯಕ್ರಮಗಳಿಗೆ ಸಿದ್ಧತೆ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಅವರು ಜಿಲ್ಲೆಯ ಶಾಸಕರು ಮತ್ತು ಸಂಸದರ ಜತೆಗೆ ಸಭೆ ನಡೆಸಿದರು.
ವಿಕಾಸ ಸೌಧದಲ್ಲಿರುವ ಸಚಿವರ ಕೊಠಡಿಯಲ್ಲಿ ಗುರುವಾರ ಸಭೆ ನಡೆಯಿತು. ಜಿಲ್ಲೆಯಲ್ಲಿನ ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕು ಪತ್ರ ವಿತರಣೆ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವ ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆಯಿತು ಎಂದು ಪ್ರಕಟಣೆ ತಿಳಿಸಿದೆ.
ಜಿಲ್ಲೆಯ ನೀರಾವರಿ ಯೋಜನೆಗಳಿಗೆ ಅನುದಾನ ನೀಡುವ ಬಗ್ಗೆ ಮುಖ್ಯಮಂತ್ರಿ ಅವರ ಗಮನ ಸೆಳೆಯಬೇಕು, ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡುವ ಬಗ್ಗೆ ಮನವಿ ಸಲ್ಲಿಸಬೇಕು ಎಂಬುದರ ಬಗ್ಗೆ ಜಿಲ್ಲಾ ಜನಪ್ರತಿನಿಧಿಗಳ ಜತೆ ಸಚಿವರು ಚರ್ಚಿಸಿದ್ದಾರೆ ಎಂದು ವಿವರಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.