ADVERTISEMENT

ದಲಿತನ ಬೆತ್ತಲೆ ಮೆರವಣಿಗೆಗೆ ಸಿಎಂ ಎಚ್‌ಡಿಕೆ ಆಕ್ರೋಶ: ಕ್ರಮಕ್ಕೆ ಸೂಚನೆ

​ಪ್ರಜಾವಾಣಿ ವಾರ್ತೆ
Published 12 ಜೂನ್ 2019, 5:32 IST
Last Updated 12 ಜೂನ್ 2019, 5:32 IST
   

ಬೆಂಗಳೂರು:ಗುಂಡ್ಲುಪೇಟೆ ತಾಲ್ಲೂಕು ಕಬ್ಬೆಕಟ್ಟೆ ಗ್ರಾಮದಲ್ಲಿ ದಲಿತ ವ್ಯಕ್ತಿ ಪ್ರತಾಪ್‌ ಎಂಬುವವರ ಮೇಲೆ ಹಲ್ಲೆ ನಡೆಸಿ ಬೆತ್ತಲೆ ಮೆರವಣಿಗೆ ಮಾಡಿದ ಪ್ರಕರಣವನ್ನು ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರು ಖಂಡಿಸಿದ್ದಾರೆ.ಸಮಾಜದಲ್ಲಿ ಜಾತಿ ವೈಷಮ್ಯ ಇನ್ನೂ ಮುಂದುವರಿದಿರುವುದು ದುರದೃಷ್ಟಕರ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಟ್ವೀಟ್‌ ಮಾಡಿರುವ ಅವರು, ‘ಗುಂಡ್ಲಪೇಟೆ ತಾಲ್ಲೂಕಿನಲ್ಲಿ ದಲಿತ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ, ಬೆತ್ತಲೆ ಮೆರವಣಿಗೆ ಮಾಡಿರುವುದು ಅತ್ಯಂತ ಅಮಾನವೀಯ. ಈ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರಿಗೆ ತಿಳಿಸಿದ್ದೇನೆ. ಸಮಾಜದಲ್ಲಿ ಜಾತಿ ವೈಷಮ್ಯ ಇನ್ನೂ ಮುಂದುವರಿದಿರುವುದು ದುರದೃಷ್ಟಕರ. ಇಂಥ ಕೃತ್ಯಗಳನ್ನು ಒಕ್ಕೊರಲಿನಿಂದ ವಿರೋಧಿಸಬೇಕು,’ ಎಂದು ಅವರು ಬರೆದುಕೊಂಡಿದ್ದಾರೆ.

ADVERTISEMENT

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಮೂವರನ್ನು ಬಂಧಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.