ADVERTISEMENT

ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷರಾಗಿ ಸಿ.ಎಂ. ಇಬ್ರಾಹಿಂ ಪದಗ್ರಹಣ ನಾಳೆ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2022, 15:24 IST
Last Updated 16 ಏಪ್ರಿಲ್ 2022, 15:24 IST
ಸಿ.ಎಂ. ಇಬ್ರಾಹಿಂ
ಸಿ.ಎಂ. ಇಬ್ರಾಹಿಂ   

ಬೆಂಗಳೂರು: ವಿಧಾನ ಪರಿಷತ್‌ನ ಮಾಜಿ ಸದಸ್ಯ ಸಿ.ಎಂ. ಇಬ್ರಾಹಿಂ ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷರಾಗಿ ಭಾನುವಾರ ಅಧಿಕಾರ ಸ್ವೀಕರಿಸಲಿದ್ದಾರೆ.

ಸುದ್ದಿಗಾರರ ಜತೆ ಶನಿವಾರ ಮಾತನಾಡಿದ ವಿಧಾನ ಪರಿಷತ್‌ನ ಜೆಡಿಎಸ್‌ ಸದಸ್ಯ ಕೆ.ಎ. ತಿಪ್ಪೇಸ್ವಾಮಿ, ‘ಭಾನುವಾರ ಬೆಳಿಗ್ಗೆ 10.15ಕ್ಕೆ ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆಯುವ ಸಮಾರಂಭದಲ್ಲಿ ಇಬ್ರಾಹಿಂ ಅಧಿಕಾರ ಸ್ವೀಕರಿಸುವರು. ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾಗಿರುವ ಎಚ್.ಕೆ. ಕುಮಾರಸ್ವಾಮಿ ಅವರು ಜೆಡಿಎಸ್‌ ಸಂಸದೀಯ ಮಂಡಳಿ ಅಧ್ಯಕ್ಷರಾಗಿ ಇದೇ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸುವರು’ ಎಂದರು.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ. ದೇವೇಗೌಡ, ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ, ಉಪ ನಾಯಕ ಬಂಡೆಪ್ಪ ಕಾಶೆಂಪೂರ ಸೇರಿದಂತೆ ಹಲವು ನಾಯಕರು ಸಮಾರಂಭದಲ್ಲಿ ಭಾಗವಹಿಸುವರು ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.