ADVERTISEMENT

ಪ್ರಧಾನಿ ಸ್ಥಾನದ ಘನತೆಗೆ ಧಕ್ಕೆ ತಂದ ಸುಳ್ಳುಗಳ ಸರದಾರ ಮೋದಿ: ಕಾಂಗ್ರೆಸ್

ಮುಖ್ಯಮಂತ್ರಿ ಕುರಿತ ಪ್ರಧಾನಿ ಹೇಳಿಕೆಗೆ ತೀಕ್ಷ್ಣ ಪ್ರತಿಕ್ರಿಯೆ * ಮುಖ್ಯಮಂತ್ರಿಯಿಂದಲೂ ತಿರುಗೇಟು

​ಪ್ರಜಾವಾಣಿ ವಾರ್ತೆ
Published 12 ಜನವರಿ 2019, 11:39 IST
Last Updated 12 ಜನವರಿ 2019, 11:39 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು:ಕರ್ನಾಟಕದಲ್ಲಿ ಮಿತ್ರ ಪಕ್ಷದ ಮುಖ್ಯಮಂತ್ರಿಯನ್ನೇ ಕಾಂಗ್ರೆಸ್ ಗುಮಾಸ್ತನ ರೀತಿಯಲ್ಲಿ ನಡೆಸಿಕೊಳ್ಳುತ್ತಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಆರೋಪಕ್ಕೆ ಕಾಂಗ್ರೆಸ್‌ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ.

‘ಪ್ರಜಾಪ್ರಭುತ್ವದ ಆಶಯದಂತೆ ರಚನೆಯಾದ ರಾಜ್ಯ ಸರ್ಕಾರದ ಮುಖ್ಯಮಂತ್ರಿಗಳನ್ನು ಕ್ಲರ್ಕ್‌ ಎಂದಿದ್ದೀರಿ. ವೈಫಲ್ಯದ ನಾಯಕ, ಸುಳ್ಳುಗಳ ಸರದಾರ ನೀವು ಪ್ರಧಾನಿ ಸ್ಥಾನದ ಘನತೆಗೆ ಕುಂದು ತಂದಿದ್ದೀರಿ. ಸದನಕ್ಕೆ ಹಾಜರಾಗಿ ನಿಮ್ಮ ಮೇಲಿನ ಭ್ರಷ್ಟಾಚಾರ ಆರೋಪಕ್ಕೆ ಉತ್ತರ ನೀಡಲಾಗದ ನಿಮ್ಮ ಈ ಒಣ ಪೌರುಷ ಹಾಸ್ಯಾಸ್ಪದ’ ಎಂದು ಕರ್ನಾಟಕ ಕಾಂಗ್ರೆಸ್ ಟ್ವೀಟ್‌ ಮಾಡಿದೆ.

ADVERTISEMENT

ಈ ಮಧ್ಯೆ, ಮೋದಿ ಆರೋಪಕ್ಕೆ ಮುಖ್ಯಮಂತ್ರಿಗಳ ಕಚೇರಿಯೂ ಟ್ವೀಟ್‌ ಮೂಲಕ ತಿರುಗೇಟು ನೀಡಿದೆ. ‘ಗೌರವಾನ್ವಿತ ಪ್ರಧಾನಮಂತ್ರಿ ನರೇಂದ್ರ ಮೋದಿಯವರುನಾನು ಆಡದೇ ಇರುವ ಮಾತನ್ನು ಉಲ್ಲೇಖಿಸಿ ಪ್ರತಿಕ್ರಿಯೆ ನೀಡಿದ್ದನ್ನು ಕೇಳಿ ವಿನೋದವಾಗಿದೆ. ಕೃಷಿ ಸಾಲದ ವಿಚಾರದ ಬಳಿಕ ಇದೀಗ ಎರಡನೇ ಬಾರಿ ಅವರು ಸುಳ್ಳು ಮಾಹಿತಿ/ಹೇಳಿಕೆ ನೀಡಿದ್ದಾರೆ. ಇಂತಹ ಹೇಳಿಕೆಗಳು ನಮ್ಮ ಮೈತ್ರಿ ಸರ್ಕಾರದ ಅಭಿವೃದ್ಧಿ ಅಜೆಂಡಾವನ್ನು ತಡೆಯಲಾರವು’ ಎಂದು ಮುಖ್ಯಮಂತ್ರಿಗಳು ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಸಮಾವೇಶದಲ್ಲಿ ಮಾತನಾಡಿದ್ದ ಮೋದಿ, ಕರ್ನಾಟಕದಲ್ಲಿನ ಮೈತ್ರಿ ಸರ್ಕಾರ ಮತ್ತು ವಿರೋಧ ಪಕ್ಷಗಳ ಮಹಾಮೈತ್ರಿಯನ್ನು ಟೀಕಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.