ADVERTISEMENT

ಬೆಳಗಾವಿ ವಿಟಿಯು ವಿಭಜನೆ ಸದ್ಯ ಇಲ್ಲ: ಮುಖ್ಯಮಂತ್ರಿ ಸ್ಪಷ್ಟನೆ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2019, 6:31 IST
Last Updated 19 ಫೆಬ್ರುವರಿ 2019, 6:31 IST
ಕುಮಾರಸ್ವಾಮಿ
ಕುಮಾರಸ್ವಾಮಿ   

ಬೆಂಗಳೂರು: ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವನ್ನು ವಿಭಜಿಸಿ ಹಾಸನದಲ್ಲಿ ಪ್ರತ್ಯೇಕ ತಾಂತ್ರಿಕ ವಿಶ್ವವಿದ್ಯಾಲಯವನ್ನು ಪ್ರಾರಂಭಿಸುವ ಪ್ರಸ್ತಾವನೆ ಸದ್ಯ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಸ್ಪಷ್ಟ ಪಡಿಸಿದ್ದಾರೆ.

ನಿನ್ನೆ ಸಮಾರಂಭವೊಂದರಲ್ಲಿ ತಮ್ಮ ಹೇಳಿಕೆ ಕುರಿತು ತಪ್ಪಾಗಿ ಗ್ರಹಿಸಲಾಗಿದೆ.ಹಾಸನವನ್ನು ಅತ್ಯುತ್ತಮ ಶೈಕ್ಷಣಿಕ ಕೇಂದ್ರವಾಗಿ ಅಭಿವೃದ್ಧಿ ಪಡಿಸಲಾಗುವುದು. ವಿಟಿಯು ವಿಭಜನೆ ಪ್ರಸ್ತಾವನೆ ಸದ್ಯಕ್ಕೆ ಸರ್ಕಾರದ ಮುಂದೆ ಇಲ್ಲ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT