ADVERTISEMENT

ರಾಜ್ಯಕ್ಕೆ ಅವಮಾನ ಮಾಡಿದ ಮುಖ್ಯಮಂತ್ರಿ: ವಿಜಯೇಂದ್ರ ಆರೋಪ

​ಪ್ರಜಾವಾಣಿ ವಾರ್ತೆ
Published 25 ಮೇ 2025, 7:32 IST
Last Updated 25 ಮೇ 2025, 7:32 IST
ಬಿ.ವೈ ವಿಜಯೇಂದ್ರ 
ಬಿ.ವೈ ವಿಜಯೇಂದ್ರ    

ಮೈಸೂರು: ನೀತಿ ಆಯೋಗದ ಸಭೆಗೆ ಗೈರು ಹಾಜರಾಗುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಕ್ಕೆ ಅವಮಾನ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದರು.

ಇಲ್ಲಿ ಭಾನುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, 'ಮುಖ್ಯಮಂತ್ರಿಯು ಸಭೆಗೆ ಗೈರು ಹಾಜರಾಗಿದ್ದ ಬಗ್ಗೆ ರಾಜ್ಯದ ಜನರಿಗೆ ತಿಳಿಸಬೇಕು. ನೆರೆಯ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಕೂಡ ಭಾಗವಹಿಸಿದ್ದರು. ಆದರೆ, ನಮ್ಮ ಮುಖ್ಯಮಂತ್ರಿ ಸಭೆಗೆ ಯಾಕೆ ಬಹಿಷ್ಕಾರ ಹಾಕಿದರು ಎಂಬುದನ್ನು ತಿಳಿಸಬೇಕು ಎಂದು ಒತ್ತಾಯಿಸಿದರು.

ಕೇಂದ್ರ ಸರ್ಕಾರದ ವಿರುದ್ಧ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಅವರು ಭಾಗವಹಿಸುತ್ತಾರೆ. ಆದರೆ, ಪ್ರಧಾನ ಮಂತ್ರಿ ಕರೆದ ಸಭೆಗೆ ಗೈರು ಹಾಜರಾಗುತ್ತಾರೆ. ರಾಜಕಾರಣ ಮಾಡುವುದೇ ರಾಜ್ಯ ಸರ್ಕಾರದ ಆದ್ಯತೆಯಾಗಿದೆ. ಅಧಿಕಾರಕ್ಕೆ ಬಂದಾಗಿನಿಂದಲೂ ಕೇಂದ್ರದ ಜೊತೆ ಸಂಘರ್ಷದ ಹಾದಿಯನ್ನು ಸಿದ್ದರಾಮಯ್ಯ ತುಳಿದಿದ್ದಾರೆ. ಪ್ರಮುಖ ಸಭೆಗೆ ಗೈರು ಹಾಜರಾಗುವುದು ರಾಜ್ಯಕ್ಕೆ ಒಳ್ಳೆಯದಲ್ಲ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.