ಬೆಂಗಳೂರು: ಪರವಾನಗಿ ಶುಲ್ಕ, ಮೊಲಾಸಸ್ ಮೇಲಿನ ಶುಲ್ಕ ಕಡಿಮೆ ಮಾಡುವಂತೆ ವೈನ್ ವ್ಯಾಪಾರಿಗಳ ಒಕ್ಕೂಟದ ಪದಾಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದರು.
ಕಾವೇರಿ ನಿವಾಸದಲ್ಲಿ ಸೋಮವಾರ ಭೇಟಿ ಮಾಡಿ, ಹಲವು ಬೇಡಿಕೆಗಳ ಈಡೇರಿಕೆ ಕುರಿತು ಚರ್ಚಿಸಿದರು.
‘ಅಬಕಾರಿ ಹಾಗೂ ಆರ್ಥಿಕ ಇಲಾಖೆ ಸಚಿವರು, ಅಧಿಕಾರಿಗಳ ಜತೆ ಚರ್ಚೆ ನಡೆಸಿ, ಬೇಡಿಕೆಗಳ ಈಡೇರಿಕೆಗೆ ಕ್ರಮ ಕೈಗೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಭರವಸೆ ನೀಡಿದರು.
ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.