ಬೆಂಗಳೂರು: ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ರಾತ್ರಿ ರಾಜಭವನದಲ್ಲಿ ಭೇಟಿ ಮಾಡಿ ಕೆಲಹೊತ್ತು ಚರ್ಚೆ ನಡೆಸಿದರು.
ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಮತ್ತು ಮುಖ್ಯಮಂತ್ರಿಯ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಅವರು ಮುಖ್ಯಮಂತ್ರಿ ಜೊತೆಗಿದ್ದರು.
ವಿವಿಧ ವಿಶ್ವವಿದ್ಯಾಲಯಗಳ ಕುಲಪತಿಗಳ ನೇಮಕದ ವಿಚಾರವಾಗಿ ಚರ್ಚಿಸಲು ರಾಜ್ಯಪಾಲರನ್ನು ಮುಖ್ಯಮಂತ್ರಿ ಭೇಟಿ ಮಾಡಿದರು ಎಂದು ಗೊತ್ತಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.