ADVERTISEMENT

ಮಹಿಳೆಯನ್ನು ರಕ್ಷಿಸಿದ ಬಾಲಕಿಯ ಧೈರ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2024, 21:20 IST
Last Updated 9 ಸೆಪ್ಟೆಂಬರ್ 2024, 21:20 IST
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ   

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಕಿನ್ನಿಗೋಳಿ ಬಳಿ ಅಪಘಾತಕ್ಕೀಡಾದ ಆಟೋವನ್ನು ಎತ್ತಿ ಅದರಡಿ ಸಿಲುಕಿದ್ದ ಮಹಿಳೆಯ ಪ್ರಾಣ ಉಳಿಸಿದ ಬಾಲಕಿಯ ಸಮಯಪ್ರಜ್ಞೆ ಮತ್ತು ಧೈರ್ಯ ಶ್ಲಾಘನೀಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

‘ಎಕ್ಸ್‌’ ಮೂಲಕ ಮೆಚ್ಚುಗೆ ಸೂಚಿಸಿರುವ ಮುಖ್ಯಮಂತ್ರಿ, ಬಾಲಕಿಯು ಯಾರ ಸಹಾಯಕ್ಕೂ ಕಾಯದೆ ಕಾರ್ಯತತ್ಪರಳಾಗಿ ನೆರವಿಗೆ ಧಾವಿಸಿದ್ದಾಳೆ ಎಂದಿದ್ದಾರೆ.

‘ಇತ್ತೀಚಿನ ದಿನಗಳಲ್ಲಿ ಅಪಘಾತ ಸಂಭವಿಸಿದ ಸ್ಥಳಗಳಲ್ಲಿ ಸಂತ್ರಸ್ತರ ನೆರವಿಗೆ ಧಾವಿಸಬೇಕಿದ್ದ ಜನರು ಸುತ್ತಲೂ ನಿಂತು ಮೊಬೈಲ್‌ ಮೂಲಕ ವಿಡಿಯೊ ಮಾಡುವುದನ್ನು ಹಲವು ಬಾರಿ ಮಾಧ್ಯಮಗಳಲ್ಲಿ ಕಂಡಿದ್ದೆ. ಇದು ಭವಿಷ್ಯದ ದಿನಗಳ ಬಗ್ಗೆ ನನ್ನಲ್ಲಿ ಆತಂಕವನ್ನೂ ಮೂಡಿಸಿತ್ತು. ಈ ಪುಟ್ಟ ಬಾಲಕಿಯ ಕಾರ್ಯ ಇಡೀ ಸಮಾಜಕ್ಕೊಂದು ಸಂದೇಶ ರವಾನಿಸಿದಂತಿದೆ’ ಎಂದು ಹೇಳಿದ್ದಾರೆ.

ADVERTISEMENT

ಅಪಘಾತ, ಬೆಂಕಿ ಅನಾಹುತ, ಹೃದಯಾಘಾತ ಇಂತಹ ತುರ್ತು ಸಂದರ್ಭದಲ್ಲಿ ಸಂತ್ರಸ್ತರ ಪಾಲಿಗೆ ಪ್ರತಿ ಸೆಕೆಂಡ್‌ ಕೂಡ ಅಮೂಲ್ಯ. ಈ ವೇಳೆ ಮಾನವೀಯತೆ ಮರೆಯಬಾರದು ಎಂದೂ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.