
ಬೆಂಗಳೂರು: ರಾಜ್ಯ ಚುನಾವಣಾ ಆಯುಕ್ತ ಎಸ್. ಸಂಗ್ರೇಶಿಯವರು ದುಬೈನಲ್ಲಿ ಸಿಲುಕಿದ್ದಾರೆ.
ಇಸ್ರೇಲ್ ಹಾಗೂ ಅಮೆರಿಕ ಸೇರಿ ಇರಾನ್ ಮೇಲೆ ದಾಳಿ ನಡೆಸಿದ ಬಳಿಕ ಪಶ್ಚಿಮ ಏಷ್ಯಾದ ದೇಶಗಳಲ್ಲಿ ವಿಮಾನ ಸಂಚಾರ ವ್ಯತ್ಯಯ ಉಂಟಾಗಿದೆ. ಹೀಗಾಗಿ ಅವರು ಮರಳಿ ಬರಲಾಗದೆ ದುಬೈನಲ್ಲಿ ಸಿಲುಕಿಕೊಂಡಿದ್ದಾರೆ.
ಖಾಸಗಿ ಕಾರ್ಯಕ್ರಮದ ನಿಮಿತ್ತ ಅವರು ದುಬೈಗೆ ತೆರಳಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರೆ ಮಾಡಿ ಯೋಗಕ್ಷೇಮ ವಿಚಾರಿಸಿದ್ದಾರೆ.
ಪತ್ನಿ ಸಮೇತರಾಗಿ ತೆರಳಿದ್ದ ಅವರು, ಕಾರ್ಯಕ್ರಮ ಮುಗಿಸಿ, ಬೆಂಗಳೂರಿಗೆ ಹಿಂದಿರುಗಲು ಭಾನುವಾರ ವಿಮಾನ ಟಿಕೆಟ್ ಕೂಡ ಕಾಯ್ದಿರಿಸಿದ್ದರು.
ಸಿಎಂ ಕರೆ ಮಾಡಿ ಧೈರ್ಯ ತುಂಬಿದ್ದಾರೆ, ಸದ್ಯಕ್ಕೆ ಏನೂ ತೊಂದರೆ ಇಲ್ಲ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.