ADVERTISEMENT

ಹೊಸ ವರ್ಷದ ಸಂಭ್ರಮ: ಸಿಎಂ, ಡಿಸಿಎಂ ಸೇರಿದಂತೆ ಗಣ್ಯರಿಂದ ಶುಭಾಶಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 1 ಜನವರಿ 2025, 4:56 IST
Last Updated 1 ಜನವರಿ 2025, 4:56 IST
<div class="paragraphs"><p>ಸಿದ್ದರಾಮಯ್ಯ, ಎಚ್.ಡಿ. ಕುಮಾರಸ್ವಾಮಿ, ಡಿ.ಕೆ. ಶಿವಕುಮಾರ್</p></div>

ಸಿದ್ದರಾಮಯ್ಯ, ಎಚ್.ಡಿ. ಕುಮಾರಸ್ವಾಮಿ, ಡಿ.ಕೆ. ಶಿವಕುಮಾರ್

   

(ಪ್ರಜಾವಾಣಿ ಚಿತ್ರಗಳು)

ಬೆಂಗಳೂರು: ನಾಡಿನ ಸಮಸ್ತ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಗಣ್ಯರು ಹೊಸ ವರ್ಷದ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ.

ADVERTISEMENT

ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, 'ಪ್ರೀತಿಯ ನಾಡಬಾಂಧವರಿಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು. ಹೊಸ ವರ್ಷವನ್ನು ಹೊಸ ಚಿಂತನೆ, ಹೊಸ ಭರವಸೆ ಹಾಗೂ ಹೊಸ ಉತ್ಸಾಹದೊಂದಿಗೆ ಬರಮಾಡಿಕೊಳ್ಳೋಣ' ಎಂದು ಶುಭಾಶಯ ತಿಳಿಸಿದ್ದಾರೆ.

'ಜಾತಿ, ಧರ್ಮಗಳ‌ ದ್ವೇಷ ತೊರೆದು ಎಲ್ಲರೂ ಒಂದಾಗಿ ಪ್ರೀತಿ-ಸಹಬಾಳ್ವೆಯ ಹಾದಿಯಲ್ಲಿ ಹೆಜ್ಜೆಹಾಕೋಣ. 2025ರ ನವ ವಸಂತ ತಮ್ಮೆಲ್ಲರ ಬಾಳಲ್ಲಿ ಸುಖ, ಶಾಂತಿ, ಸಮೃದ್ಧಿಯನ್ನು ತರಲಿ' ಎಂದು ಹಾರೈಸಿದ್ದಾರೆ.

'ಹೊಸ ವರ್ಷವು ಸಮೃದ್ಧಿಯನ್ನು ತರಲಿ, ಹೊಸ ಅವಕಾಶ ಸಾಧನೆಯೊಂದಿಗೆ ಗುರುತಿಸ್ಪಡಲಿ' ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶುಭ ಹಾರೈಸಿದ್ದಾರೆ.

ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೊಸ ವರ್ಷದ ಶುಭಾಶಯ ತಿಳಿಸಿದ್ದು, '2025ನೇ ವರ್ಷ ಶುಭ ತರಲಿ, ಎಲ್ಲರ ಮನ ಮನೆಗಳಲ್ಲಿ ಸುಖ ಶಾಂತಿ, ನೆಮ್ಮದಿ ಸಮೃದ್ಧಿ ನೆಲೆಸಲಿ' ಎಂದು ಹೇಳಿದ್ದಾರೆ.

'ಹೊಸ ವರ್ಷದಲ್ಲಿ ಭಾರತದ ಸಾಧನೆ ದಿಗಂತಕ್ಕೇರುವುದರ ಜೊತೆಗೆ, ಗೌರವಾನ್ವಿತ ಪ್ರಧಾನಿಗಳಾದ ನರೇಂದ್ರ ಮೋದಿ ಅವರ ಕನಸಿನ ವಿಕಸಿತ ಭಾರತ ಸಾಕಾರಕ್ಕೆ ಶಕ್ತಿ ತುಂಬಲಿ ಎಂದು ಹಾರೈಸುತ್ತೇನೆ. ಈ ನಿಟ್ಟಿನಲ್ಲಿ ನಾವೆಲ್ಲರೂ ಶ್ರಮಿಸೋಣ' ಎಂದು ಮನವಿ ಮಾಡಿದ್ದಾರೆ.

ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ, 'ಈ ಹೊಸ ವರ್ಷ ಎಲ್ಲರ ಬಾಳಿನಲ್ಲಿ ಸುಖ, ಸಂತೋಷ, ಸಮೃದ್ಧಿ, ನೆಮ್ಮದಿ ಮತ್ತು ಯಶಸ್ಸನ್ನು ತರಲಿ' ಎಂದು ಶುಭ ಹಾರೈಸಿದ್ದಾರೆ.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೊಸ ವರ್ಷದ ಶುಭಾಶಯಗಳನ್ನು ಕೋರಿದ್ದಾರೆ. 'ವರ್ಷಪೂರ್ತಿ ಕರುನಾಡ ತುಂಬೆಲ್ಲಾ ಹರುಷ ಪಸರಿಸಲಿ, ಅತಿವೃಷ್ಟಿ-ಅನಾವೃಷ್ಟಿಗಳು ರಾಜ್ಯವನ್ನು ಬಾಧಿಸದಿರಲಿ, ಯುವ ಜನರ ಬದುಕಿನಂಗಳದಲ್ಲಿ ಹೊಸ ಬೆಳಕು ಚೆಲ್ಲಲಿ, ಭರವಸೆಗಳು ಹೊಮ್ಮಲಿ ರೈತರು, ಕೃಷಿ ಕಾರ್ಮಿಕರು, ಶ್ರಮಿಕ ವರ್ಗದ ಜನರ ಬದುಕಿನಲ್ಲಿ ಹೊಸ ಚೈತನ್ಯ ಮೂಡಲಿ, ಪ್ರಧಾನಿ ಮೋದಿ ಜೀ ಅವರ ನೇತೃತ್ವದಲ್ಲಿ ಭಾರತವು ವಿಶ್ವಭೂಪಟದಲ್ಲಿ ಅಗ್ರ ಸ್ಥಾನ ಆಕ್ರಮಿಸಲಿ, 2025 ಜಾಗತಿಕ ತಾಪಮಾನ ಇಳಿಯಲಿ-ಯುದ್ಧ ಪೀಡನೆಯೂ ತೊಲಗಲಿ, ಪ್ರತಿಯೊಬ್ಬರ ಬದುಕಲ್ಲೂ ಶಾಂತಿ-ಸಂತಸ ಮೇಳೈಸಲಿ' ಎಂದು ಶುಭ ಹಾರೈಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.