
ಪ್ರಜಾವಾಣಿ ವಾರ್ತೆಸಿದ್ದರಾಮಯ್ಯ
ಮೈಸೂರು: ದೆಹಲಿಗೆ ನ. 15ರಂದು ಹೋಗುತ್ತಿದ್ದೇನೆ. ಆ ದಿನವೇ ವಾಪಸ್ ಬರುವ ಅಂದಾಜಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಲ್ಲಿ ತಿಳಿಸಿದರು.
ಹಿರಿಯ ನಾಯಕ ಕಪಿಲ್ ಸಿಬಲ್ ಅವರ ಕಾರ್ಯಕ್ರಮದಲ್ಲಿ ಭಾಗವಹಿಸಲು ಅಂದು ಹೋಗುತ್ತಿರುವುದಾಗಿಯೂ ಅವರು ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.
‘ಈ ಅವಧಿಯಲ್ಲಿ ರಾಹುಲ್ ಗಾಂಧಿ ಅವರ ಭೇಟಿಗೆ ಸಮಯ ಕೋರಲಾಗಿದೆ. ಅವಕಾಶ ಸಿಕ್ಕರೆ ಹೈಕಮಾಂಡ್ ಭೇಟಿಯಾಗುತ್ತೇನೆ’ ಎಂದೂ ಮುಖ್ಯಮಂತ್ರಿ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.