ADVERTISEMENT

ಸಚಿವರ ಜತೆ ಸಿ.ಎಂ ಸಿದ್ದರಾಮಯ್ಯ ಚರ್ಚೆ

​ಪ್ರಜಾವಾಣಿ ವಾರ್ತೆ
Published 14 ಮೇ 2024, 11:24 IST
Last Updated 14 ಮೇ 2024, 11:24 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಗೃಹ ಸಚಿವ ಜಿ. ಪರಮೇಶ್ವರ ಸೇರಿದಂತೆ ಕೆಲವು ಸಚಿವರ ಜತೆ ಮಂಗಳವಾರ ಬೆಳಿಗ್ಗೆ ಕೆಲಕಾಲ ಚರ್ಚೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಜ್ವಲ್‌ ರೇವಣ್ಣ ಪ್ರಕರಣ ಹಾಗೂ ಲೋಕಸಭಾ ಚುನಾವಣಾ ಫಲಿತಾಂಶದ ಕುರಿತು ವಿಚಾರ ವಿನಿಮಯ ನಡೆಸಿದರು.

ಮುಖ್ಯಮಂತ್ರಿಯವರು ಮೈಸೂರು ಪ್ರವಾಸಕ್ಕೆ ತೆರಳುವ ಮುನ್ನ ಪರಮೇಶ್ವರ ಅವರು ಮುಖ್ಯಮಂತ್ರಿಯವರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಭೇಟಿಯಾದರು. ಶಿವಕುಮಾರ್‌, ಸಚಿವರಾದ ಡಾ.ಎಚ್‌.ಸಿ. ಮಹದೇವಪ್ಪ, ಮಧು ಬಂಗಾರಪ್ಪ , ಎನ್‌. ಚೆಲುವರಾಯಸ್ವಾಮಿ ಕೂಡ ಇದ್ದರು. ಸಭೆಯ ಬಳಿಕ ಮುಖ್ಯಮಂತ್ರಿಯವರು ಮೈಸೂರಿನತ್ತ ತೆರಳಿದರು.

ಸಭೆಯ ಬಳಿಕ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರ ಸರ್ಕಾರಿ ನಿವಾಸಕ್ಕೆ ತೆರಳಿದ ಪರಮೇಶ್ವರ, ಅವರೊಂದಿಗೂ ಕೆಲಕಾಲ ಚರ್ಚೆ ನಡೆಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.