ADVERTISEMENT

ರಸ್ತೆ ಅಪಘಾತದಲ್ಲಿ ಪ್ರೊಬೇಷನರಿ IPS ಅಧಿಕಾರಿ ಸಾವು: ಸಿಎಂ ಸಿದ್ದರಾಮಯ್ಯ ಸಂತಾಪ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 2 ಡಿಸೆಂಬರ್ 2024, 4:42 IST
Last Updated 2 ಡಿಸೆಂಬರ್ 2024, 4:42 IST
<div class="paragraphs"><p>ಹರ್ಷಬರ್ಧನ್</p></div>

ಹರ್ಷಬರ್ಧನ್

   

ಬೆಂಗಳೂರು: ಐಪಿಎಸ್ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಲು ತೆರಳುತ್ತಿದ್ದ ವೇಳೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಹರ್ಷಬರ್ಧನ್ ಅವರು ಮೃತಪಟ್ಟಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಹಲವರು ಸಂತಾಪ ಸೂಚಿಸಿದ್ದಾರೆ.

‘ಹಾಸನ-ಮೈಸೂರು ಹೆದ್ದಾರಿಯ ಕಿತ್ತಾನೆ ಗಡಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಪ್ರೊಬೇಷನರಿ ಐಪಿಎಸ್ ಅಧಿಕಾರಿ ಹರ್ಷಬರ್ಧನ್ ಅವರು ನಿಧನರಾದ ವಿಷಯ ತಿಳಿದು ದುಃಖವಾಯಿತು. ಐಪಿಎಸ್ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಲು ತೆರಳುತ್ತಿದ್ದ ವೇಳೆ ಇಂಥದ್ದೊಂದು ದುರ್ಘಟನೆ ಜರುಗಿದೆ ಎನ್ನುವುದು ಅತ್ಯಂತ ಬೇಸರದ ಸಂಗತಿ. ವರ್ಷಗಳ‌ ಕಠಿಣ ಪರಿಶ್ರಮ ಫಲ ನೀಡುವ ಹೊತ್ತಲ್ಲಿ ಹೀಗಾಗಬಾರದಿತ್ತು. ಹರ್ಷಬರ್ಧನ್ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಮೃತನ ಕುಟುಂಬಕ್ಕೆ ನನ್ನ ಸಂತಾಪಗಳು’ ಎಂದು ಸಿಎಂ ಸಿದ್ದರಾಮಯ್ಯ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದ್ದಾರೆ.

ADVERTISEMENT

ಹರ್ಷಬರ್ಧನ್ ಅವರು ಪ್ರೊಬೇಷನರಿ ಎಎಸ್ಪಿಯಾಗಿ ಹಾಸನಕ್ಕೆ ನಿಯೋಜನೆಗೊಂಡಿದ್ದರು. ಕರ್ತವ್ಯಕ್ಕೆ ಹಾಜರಾಗಲು ಬರುವ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಪೊಲೀಸ್‌‍ ಜೀಪ್‌ ಪಕ್ಕದ ಮನೆಗೆ ಡಿಕ್ಕಿ ಹೊಡೆದಿತ್ತು. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಹರ್ಷಬರ್ಧನ್‌ ಅವರು ಭಾನುವಾರ ಮೃತಪಟ್ಟಿದ್ದರು.

ಹರ್ಷಬರ್ಧನ್‌ ಅವರು ಮಧ್ಯಪ್ರದೇಶದ ಸಿಂಗ್ರುಲಿ ಜಿಲ್ಲೆಯ ದೋಸಾರ್‌ ಗ್ರಾಮದವರು. ಜೀಪ್‌ ಚಾಲಕ, ಹಾಸನದ ಡಿಎಆರ್‌ ಕಾನ್‌ಸ್ಟೆಬಲ್‌ ಮಂಜೇಗೌಡ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.