
ಸಿದ್ದರಾಮಯ್ಯ
ಬೆಳಗಾವಿ: ‘ಅಲ್ಪಸಂಖ್ಯಾತರೂ ಸೇರಿದಂತೆ ಎಲ್ಲರಿಗೂ ರಕ್ಷಣೆ ನೀಡುವುದಾಗಿ ಹೇಳಿದ್ದೇನೆ. ಅದರಲ್ಲಿ ತಪ್ಪೇನಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
ಮಂಗಳವಾರ ಇಲ್ಲಿನ ಸುವರ್ಣಸೌಧದಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ಮುಸ್ಲಿಂ ಸಮುದಾಯಕ್ಕೆ ಬಜೆಟ್‌ನಲ್ಲಿ ಅನುದಾನ ನೀಡುವುದಾಗಿ ಹೇಳಿದ್ದೇನೆ. ವರದಿ ಹೊರತು ಬೇರೇನೂ ಮಾತನಾಡಿಲ್ಲ. ಎರಡು ಪತ್ರಿಕೆಗಳಲ್ಲಿ ಮಾತ್ರ ಸರಿಯಾದ ವರದಿ ಬಂದಿದೆ’ ಎಂದರು.
ಸೋಮವಾರ ಹುಬ್ಬಳ್ಳಿಯಲ್ಲಿ ನಡೆದ ದಕ್ಷಿಣ ಭಾರತದ ಮುಸ್ಲಿಂ ಧರ್ಮ ಗುರುಗಳ ಸಮಾವೇಶದಲ್ಲಿ ಮಾತನಾಡಿದ್ದ ಸಿದ್ದರಾಮಯ್ಯ, ‘ಹಿಂದೆ ನಾನು ಮುಖ್ಯಮಂತ್ರಿಯಾಗಿದ್ದಾಗ ಅಲ್ಪಸಂಖ್ಯಾತರಿಗೆ ನೀಡುತ್ತಿದ್ದ ಅನುದಾನವನ್ನು ಹಿಂದಿನ ಸರ್ಕಾರ ಕಡಿತ ಮಾಡಿತ್ತು. ಮುಂದಿನ ದಿನಗಳಲ್ಲಿ ಅನುದಾನ ಹೆಚ್ಚಿಸುತ್ತೇನೆ. ₹10 ಸಾವಿರ ಕೋಟಿವರೆಗೆ ಅನುದಾನ ನೀಡಲು ಸಿದ್ಧ’ ಎಂದಿದ್ದರು.
ಈ ಬಗ್ಗೆ ಮಂಗಳವಾರ ಬೆಳಿಗ್ಗೆಯೇ ಪ್ರತಿಕ್ರಿಯಿಸಿದ್ದ ಬಿಜೆಪಿ ನಾಯಕರು, ‘ಸಿದ್ದರಾಮಯ್ಯ ಮುಸ್ಲಿಮರ ತುಷ್ಟೀಕರಣಕ್ಕೆ ಮುಂದಾಗಿದ್ದಾರೆ’ ಎಂದು ಹರಿಹಾಯ್ದಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.