ADVERTISEMENT

ಗ್ಯಾರಂಟಿಗಳ ಜಾರಿಗೆ ಸಿಎಂಗೆ ಪರಮಾಧಿಕಾರ: ಸಚಿವರ ಸಭೆಯಲ್ಲಿ ನಿರ್ಧಾರ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 31 ಮೇ 2023, 9:19 IST
Last Updated 31 ಮೇ 2023, 9:19 IST
   

ಬೆಂಗಳೂರು: ಚುನಾವಣೆ ಸಂದರ್ಭದಲ್ಲಿ ರಾಜ್ಯದ ಜನರಿಗೆ ನೀಡಿರುವ ಗ್ಯಾರಂಟಿ ಯೋಜನೆಗಳ ಜಾರಿ ಬಗ್ಗೆ ವಿಧಾನಸೌಧದಲ್ಲಿ ಸಚಿವರೊಂದಿಗೆ ನಡೆಯುತ್ತಿದ್ದ ಸಭೆ ಮುಕ್ತಾಯಗೊಂಡಿದೆ. ಒಂದೂವರೆ ಗಂಟೆಗೂ ಹೆಚ್ಚು ಕಾಲ ನಡೆದ ಸಭೆಯಲ್ಲಿ ಗ್ಯಾರಂಟಿಗಳ ಜಾರಿಗೆ ಸಿಎಂಗೆ ಪರಮಾಧಿಕಾರ ನೀಡಲಾಗಿದೆ.

ನಾಳೆ ಅಧಿಕಾರಿಗಳ ಜೊತೆ ಮತ್ತೊಂದು ಸುತ್ತಿನ ಸಭೆ ನಡೆಯಲಿದ್ದು, ಶುಕ್ರವಾರ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 5 ಗ್ಯಾರಂಟಿ ಜಾರಿ ಖಚಿತ ಎಂದೂ ಅವರು ಪುನರುಚ್ಛರಿಸಿದ್ದಾರೆ. ಸಚಿವರು, ಅಧಿಕಾರಿಗಳಿಂದ ಎಲ್ಲ ಮಾಹಿತಿ ಪಡೆದಿದ್ದೇನೆ ಎಂದು ಸಭೆ ಬಳಿಕ ಮುಖ್ಯಮಂತ್ರಿ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷ ನೀಡಿದ್ದ ಪ್ರಮುಖ 5 ಗ್ಯಾರಂಟಿ ಯೋಜನೆಗಳ ಜಾರಿ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಅವರು ಸರ್ಕಾರದ ಎಲ್ಲಾ ಸಚಿವರುಗಳು ಮತ್ತು ಸಂಬಂಧಪಟ್ಟ ಇಲಾಖೆಗಳ ಹಿರಿಯ ಅಧಿಕಾರಿಗಳ ಜತೆ ಮಹತ್ವದ ಸಭೆ ನಡೆಸಿದರು ಎಂದು ಮುಖ್ಯಮಂತ್ರಿ ಕಚೇರಿ ಟ್ವೀಟ್ ಮಾಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.