ADVERTISEMENT

ನಿರ್ಗತಿಕರಿಗೆ ನ್ಯಾಯ ಕೊಟ್ಟ ಅರಸು: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 6 ಜೂನ್ 2025, 16:07 IST
Last Updated 6 ಜೂನ್ 2025, 16:07 IST
ದೇವರಾಜ ಅರಸು ಅವರ ಭಾವಚಿತ್ರಕ್ಕೆ ಸಿದ್ದರಾಮಯ್ಯ ಅವರು ಮಾಲಾರ್ಪಣೆ ಮಾಡಿದರು. ಶಿವರಾಜ ತಂಗಡಗಿ  ಪಾಲ್ಗೊಂಡಿದ್ದರು
ದೇವರಾಜ ಅರಸು ಅವರ ಭಾವಚಿತ್ರಕ್ಕೆ ಸಿದ್ದರಾಮಯ್ಯ ಅವರು ಮಾಲಾರ್ಪಣೆ ಮಾಡಿದರು. ಶಿವರಾಜ ತಂಗಡಗಿ  ಪಾಲ್ಗೊಂಡಿದ್ದರು   

ಬೆಂಗಳೂರು: ‘ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರು ರಾಜ್ಯ ಕಂಡ ಮುತ್ಸದ್ದಿ ರಾಜಕಾರಣಿಗಳಲ್ಲಿ ಒಬ್ಬರು. ಬಡವರು, ತುಳಿತಕ್ಕೆ ಒಳಗಾದವರು ಮತ್ತು ಅವಕಾಶ ವಂಚಿತರ ಬಗ್ಗೆ ಅಪಾರ ಕಾಳಜಿ ಹೊಂದಿದ್ದರು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ದೇವರಾಜ ಅರಸು ಅವರ 43ನೇ ಪುಣ್ಯಸ್ಮರಣೆ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ಅರಸು ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು.

‘ರಾಜಕೀಯದಲ್ಲಿ ಅವಕಾಶವೇ ಸಿಗದ ಜನಾಂಗದವರಿಗೆ ಪ್ರಾತಿನಿಧ್ಯ ದೊರಕಿಸಿಕೊಟ್ಟರು. ಹಾವನೂರು ಆಯೋಗವನ್ನು ರಚನೆ ಮಾಡಿ, ಅದರ ವರದಿ ಪಡೆದು ಜಾರಿ ಮಾಡಿ ಉದ್ಯೋಗದಲ್ಲಿ ಮೀಸಲಾತಿ ಕೊಟ್ಟರು’ ಎಂದು ಸಿದ್ದರಾಮಯ್ಯ ಹೇಳಿದರು.

ADVERTISEMENT

‘ಉಳುವವನೇ ಭೂಮಿಯ ಒಡೆಯ’ ಕಾನೂನು ಜಾರಿ ಮಾಡಿ ಭೂರಹಿತರನ್ನು ಭೂಒಡೆಯರನ್ನಾಗಿಸಿದರು. ಜೀತಪದ್ಧತಿ ರದ್ದು ಮಾಡಿ, ಮಲ ಹೊರುವ ಪದ್ಧತಿಯನ್ನು ನಿಲ್ಲಿಸಿದರು. ನಮ್ಮ ಸರ್ಕಾರ ಅರಸು ಅವರ ಕೆಲಸಗಳಿಂದ ಸ್ಫೂರ್ತಿ ಪಡೆದು ಸಾಮಾಜಿಕ ನ್ಯಾಯದೆಡೆಗೆ ದೃಢ ಹೆಜ್ಜೆಗಳನ್ನು ಇರಿಸಿದೆ. ಅದೇ ಅವರಿಗೆ ಸಲ್ಲಿಸುವ ಗೌರವ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.