ADVERTISEMENT

ಸಹಕಾರಿ ಬ್ಯಾಂಕ್‌ಗಳಲ್ಲಿ ರೈತರ ಸಾಲ: ಅಸಲು ಕಟ್ಟಿದರೆ ಬಡ್ಡಿ‌ ಮನ್ನಾ-ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2023, 9:42 IST
Last Updated 15 ಡಿಸೆಂಬರ್ 2023, 9:42 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಬೆಳಗಾವಿ: ಸಹಕಾರಿ ಬ್ಯಾಂಕ್‌ಗಳಲ್ಲಿ ರೈತರು ಪಡೆದಿರುವ ಮಧ್ಯಮಾವಧಿ ಹಾಗೂ ದೀರ್ಘಾವಧಿ ಸಾಲಗಳ ಅಸಲನ್ನು ಅವಧಿಯೊಳಗೆ ಪಾವತಿಸಿದರೆ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಧಾನಸಭೆಯಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ನಡೆದ ಚರ್ಚೆಗೆ, ಶುಕ್ರವಾರ ಅವರು ಉತ್ತರ ನೀಡಿದರು.

ಸಾಲದ ಮೇಲಿನ ಬಡ್ಡಿ‌ಮನ್ನಾ ಮಾಡುವ ಬಗ್ಗೆ ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಹೇಳಿರಲಿಲ್ಲ. ಆದರೂ ಮಾಡುತ್ತಿದ್ದೇವೆ. 2018ರ ವಿಧಾನಸಭೆ ಚುನಾವಣೆಗೂ ಮುನ್ನ ಬಿಜೆಪಿ ಪ್ರಣಾಳಿಕೆಯಲ್ಲಿ ₹1 ಲಕ್ಷದವರೆಗಿನ ಸಾಲ ಮನ್ನಾ ಮಾಡುವುದಾಗಿ ಹೇಳಿದ್ದರು. ಯಡಿಯೂರಪ್ಪ ಮುಖ್ಯಮಂತ್ರಿ ಯಾದ ಬಳಿಕವೂ ಮನ್ನಾ ಮಾಡಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.