ಹಾಸನ: ರಾಜ್ಯದಲ್ಲಿ ಯೂರಿಯಾ ರಸಗೊಬ್ಬರ ಕೊರತೆ ಇಲ್ಲ. ಈ ಬಾರಿ ಐದು ಲಕ್ಷ ಹೆಕ್ಟೇರ್ ಹೆಚ್ಚು ಬಿತ್ತನೆ ಆಗಿರುವುದರಿಂದ, ಗೊಬ್ಬರದ ಬೇಡಿಕೆ ಸ್ವಲ್ಪ ಹೆಚ್ಚಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅರಸೀಕೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆ ಹೆಚ್ಚಾಗಿದ್ದು, ಮುಂಗಾರು ಮಳೆ ಬೇಗ ಶುರುವಾಯಿತು. ಜೋಳ ಹಾಕಿರುವುದು ಜಾಸ್ತಿ ಆಗಿದೆ. ಹಾಗಾಗಿ ಜಾಸ್ತಿ ರಸಗೊಬ್ಬರ ಉಪಯೋಗಿಸಿದ್ದಾರೆ ಎಂದರು.
ಸಂಪುಟ ಪುನರ್ ರಚನೆ ಆದಾಗ ನೋಡೋಣ. ಈಗಲೇ ಹೇಳಲು ಬರಲ್ಲ. ಯಾರ‍್ಯಾರು ಆಕಾಂಕ್ಷಿಗಳಿದ್ದಾರೋ ಎಲ್ಲರಿಗೂ ಅವಕಾಶ ಸಿಗುತ್ತದೆ ಎಂದು ಹೇಳಿದರು.
ಹಾಸನ ಮಹಾನಗರಪಾಲಿಕೆಗೆ ಹಣ ಬಿಡುಗಡೆ ಮಾಡಲ್ಲ ಎಂದು ಸರ್ಕಾರ ಕಾರ್ಯದರ್ಶಿಗಳು ಬರೆದಿರುವ ಪತ್ರದ ಬಗ್ಗೆ ವಿಚಾರ ಮಾಡುತ್ತೇನೆ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.