ADVERTISEMENT

ಜೈನಮುನಿ ಹತ್ಯೆ ಪ್ರಕರಣ | ಶಿಕ್ಷೆಯಾಗುವಂತೆ ಕ್ರಮ ಜರುಗಿಸಿ: ಸಿಎಂ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 8 ಜುಲೈ 2023, 23:30 IST
Last Updated 8 ಜುಲೈ 2023, 23:30 IST
ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ   

ಬೆಂಗಳೂರು: ‘ಹಿರೇಕೋಡಿಯ ಜೈನಮುನಿ ಹತ್ಯೆ ಪ್ರಕರಣದ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರಿಗೆ ನ್ಯಾಯಾಲಯದಲ್ಲಿ ಶಿಕ್ಷೆ ಆಗುವಂತೆ ಕಾನೂನು ಕ್ರಮ ಕೈಗೊಳ್ಳಿ’ ಎಂದು ಹಿರಿಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಘಟನೆಗೆ ತೀವ್ರ ಆಘಾತ ವ್ಯಕ್ತಪಡಿಸಿರುವ ಮುಖ್ಯಮಂತ್ರಿ, ‘ಕಾನೂನುಬಾಹಿರ ಕೃತ್ಯ ಎಸಗುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ. ಕಾನೂನು ಕೈಗೆತ್ತಿಕೊಳ್ಳುವ ಹಕ್ಕು ಯಾರಿಗೂ ಇಲ್ಲ. ತಪ್ಪು ಯಾರೇ ಮಾಡಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದಿದ್ದಾರೆ.

‘ಈಗಾಗಲೇ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಯಾವುದೇ ಆರೋಪಿ ಕಾನೂನಿನಿಂದ ತಪ್ಪಿಸಿಕೊಳ್ಳಬಾರದು ಎನ್ನುವ ಸೂಚನೆಯನ್ನು ಅಧಿಕಾರಿಗಳಿಗೆ ನೀಡಿದ್ದೇನೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.