‘ವಿಡಿಯೊ ಮಾಡಿದರು, ಅದನ್ನು ಬಿಡುಗಡೆ ಮಾಡಿದರು ಎನ್ನುವುದು ಮಹತ್ವದ್ದಲ್ಲ. ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಮಾಡಿರುವುದು ಮಹತ್ವದ್ದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ಹೇಳಿದರು. ‘ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ವಿಚಾರಣೆಗೆ ಒಳಪಡಿಸಬೇಕು’ ಎಂಬ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಇಲ್ಲಿ ಶುಕ್ರವಾರ ಪ್ರತಿಕ್ರಿಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.