
ಬೆಂಗಳೂರು: ಜಂಟಿ ಅಧಿವೇಶನಕ್ಕೆ ಸರ್ಕಾರ ಸಿದ್ಧಪಡಿಸಿದ 28 ಪುಟಗಳ ಭಾಷಣವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು (ಗುರುವಾರ) ಸದನದಲ್ಲಿ ಮಂಡಿಸಿ ಶಾಸಕರಿಗೆ ವಿತರಿಸಿದರು.
ಜಂಟಿ ಅಧಿವೇಶನ ಉದ್ದೇಶಿಸಿ ಸರ್ಕಾರ ಸಿದ್ಧಪಡಿಸಿದ್ದ ಭಾಷಣವನ್ನು ಓದದೆ, ತಾವೇ ಸಿದ್ಧಪಡಿಸಿಕೊಂಡು ಬಂದಿದ್ದ ಭಾಷಣವನ್ನು ಓದಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ನಿರ್ಗಮಿಸಿದ್ದರು.
ರಾಜ್ಯಪಾಲರ ಈ ನಡೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಖಂಡಿಸಿದ್ದಾರೆ.
‘ರಾಜ್ಯಪಾಲರು ಸಚಿವ ಸಂಪುಟ ತಯಾರಿಸಿದ ಭಾಷಣ ಓದದೆ, ಅವರೇ ತಯಾರು ಮಾಡಿದ ಒಂದು ಪ್ಯಾರಾ ಭಾಷಣ ಓದಿ, ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಅವರು ಸಂವಿಧಾನವನ್ನು ಉಲ್ಲಂಘಿಸಿದ್ದಾರೆ’ ಎಂದು ಹೇಳಿದ್ದಾರೆ.
‘ಸರ್ಕಾರ ತಯಾರಿ ಮಾಡಿದ ಭಾಷಣವನ್ನು ಎಲ್ಲ ಶಾಸಕರಿಗೆ, ಪರಿಷತ್ ಸದಸ್ಯರಿಗೆ ನೀಡಿದ್ದೇವೆ’ ಎಂದೂ ಅವರು ತಿಳಿಸಿದ್ದಾರೆ.
ಸರ್ಕಾರ ಸಿದ್ಧಪಡಿಸಿದ ಭಾಷಣದ ಪೂರ್ಣ ಪಾಠ ಇಲ್ಲಿದೆ... (ಪಿಡಿಎಫ್ ಫೈಲ್ ಲಗತ್ತಿಸಲಾಗಿದೆ.)
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.