ADVERTISEMENT

Rameshwaram Cafe blast: NIA, ರಾಜ್ಯ ಪೊಲೀಸರ ಕಾರ್ಯ ಶ್ಲಾಘನೀಯ: ಸಿದ್ದರಾಮಯ್ಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 13 ಏಪ್ರಿಲ್ 2024, 7:36 IST
Last Updated 13 ಏಪ್ರಿಲ್ 2024, 7:36 IST
<div class="paragraphs"><p>ಸಿದ್ದರಾಮಯ್ಯ</p></div>

ಸಿದ್ದರಾಮಯ್ಯ

   

(ಚಿತ್ರ ಕೃಪೆ: X/@siddaramaiah)

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಪ್ರಮುಖ ಆರೋಪಿಗಳನ್ನು ಬಂಧಿಸಿರುವ ಎನ್‌ಎಐ ತಂಡ ಮತ್ತು ಕರ್ನಾಟಕ ಪೊಲೀಸರ ಕಾರ್ಯ ಶ್ಲಾಘನೀಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ADVERTISEMENT

ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್‌'ನಲ್ಲಿ ಬರೆದುಕೊಂಡಿರುವ ಅವರು, ಆರೋಪಿಗಳನ್ನು ವಿಚಾರಣೆ ಮಾಡಿ ಹೆಚ್ಚಿನ ವಿವರ ಪಡೆಯಲಾಗುವುದು ಎಂದು ಮಾಹಿತಿ ನೀಡಿದರು.

ಎನ್‌ಡಿಎಗೆ ಪೂರ್ಣ ಬಹುಮತ ದೊರಕುವುದಿಲ್ಲ: ಸಿಎಂ

ಎನ್‌ಡಿಎಗೆ ಪೂರ್ಣ ಬಹುಮತ ದೊರಕುವುದಿಲ್ಲ. 'ಇಂಡಿಯಾ' ಮೈತ್ರಿಗೆ ಬಹುಮತ ದೊರೆಯಲಿದೆ. 400ಕ್ಕೂ ಹೆಚ್ಚು ಸ್ಥಾನ ಪಡೆಯುವುದಾಗಿ ಹೇಳಿಕೊಳ್ಳುತ್ತಿರುವ ಬಿಜೆಪಿಯದ್ದು ಜನರನ್ನು ದಾರಿ ತಪ್ಪಿಸುವ ಕಾರ್ಯತಂತ್ರವಾಗಿದೆ ಎಂದು ಅವರು ಹೇಳಿದರು.

ರಾಜ್ಯಕ್ಕೆ ಪ್ರಧಾನಿ ಭೇಟಿ ಕುರಿತು ಪ್ರತಿಕ್ರಿಯಿಸಿದ ಅವರು, ಮೋದಿಯವರು ಬಂದು ಹೋಗಲು ನನ್ನದೇನೂ ತಕರಾರಿಲ್ಲ. ಕರ್ನಾಟಕಕ್ಕೆ ಏನು ಮಾಡಿದ್ದಾರೆ ಎಂದು ರಾಜ್ಯದ ಜನತೆಗೆ ಹೇಳಬೇಕು. ನಿರುದ್ಯೋಗ ಯಾಕೆ ಮಿತಿಮೀರಿದೆ? ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಯಾಕೆ ಅನ್ಯಾಯವಾಗುತ್ತಿದೆ? ಬರಗಾಲಕ್ಕೆ ಇಂದಿನವರೆಗೂ ಯಾಕೆ ಪರಿಹಾರ ನೀಡಿಲ್ಲ? ಎಂಬುದಕ್ಕೆಲ್ಲಾ ಪ್ರಧಾನಿ ಉತ್ತರ ಹೇಳಲಿ ಎಂದು ಸವಾಲು ಹಾಕಿದರು.

ಶಂಕಿತರು 10 ದಿನ ಎನ್ಐಎ ಕಸ್ಟಡಿಗೆ...

'ರಾಮೇಶ್ವರಂ ಕೆಫೆ‌' ಬಾಂಬ್ ಸ್ಫೋಟ ಪ್ರಕರಣದ ಇಬ್ಬರು ಶಂಕಿತರನ್ನು ಬೆಂಗಳೂರಿಗೆ ಕರೆತಂದು ನ್ಯಾಯಾಯಲಕ್ಕೆ ಹಾಜರುಪಡಿಸಲಾಗಿದ್ದು, 10 ದಿನ ಎನ್ಐಎ ಕಸ್ಟಡಿಗೆ ಒಪ್ಪಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.