ಮುಖ್ಯಮಂತ್ರಿ ಸಿದ್ದರಾಮಯ್ಯ
– ಪ್ರಜಾವಾಣಿ ಚಿತ್ರ
ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಸಂಪುಟದ ಸದಸ್ಯರು ಸೋಮವಾರ ಸಂಜೆ ದೆಹಲಿಗೆ ಬರಲಿದ್ದು, ರಾಷ್ಟ್ರಪತಿ ಹಾಗೂ ಕೇಂದ್ರ ಸಚಿವರನ್ನು ಭೇಟಿ ಮಾಡಲಿದ್ದಾರೆ.
ಬುಧವಾರದವರೆಗೆ ನವದೆಹಲಿಯಲ್ಲಿ ಇರಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ಐದು ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ವಿವಿಧ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೆ ಕಾಲಾವಕಾಶ ಕೇಳಲಾಗಿದೆ ಎಂದು ಮುಖ್ಯಮಂತ್ರಿ ಸಚಿವಾಲಯ ತಿಳಿಸಿದೆ.
ಈ ನಡುವೆ, ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ವಿಧಾನ ಪರಿಷತ್ ನಾಮನಿರ್ದೇಶನ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮತ್ತಿತರ ವಿಷಯಗಳ ಕುರಿತು ಚರ್ಚಿಸುವ ಸಾಧ್ಯತೆ ಇದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.