ಸಿದ್ದರಾಮಯ್ಯ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ದೆಹಲಿಯಲ್ಲಿ ಪಕ್ಷದ ವರಿಷ್ಠರನ್ನು ಭೇಟಿಯಾಗಲಿರುವ ಸಿದ್ದರಾಮಯ್ಯ ಅವರು ಇತ್ತೀಚಿನ ಬೆಳವಣಿಗೆಗಳ ಬಗ್ಗೆ ವಿವರ ನೀಡಲಿದ್ದಾರೆ.
ಈ ನಡುವೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭಾನುವಾರವೇ ದೆಹಲಿ ತಲುಪಿದ್ದಾರೆ.
ಈ ವೇಳೆ ಪಿಟಿಐ ಜೊತೆ ಮಾತನಾಡಿರುವ ಅವರು, ‘ಬೆಂಗಳೂರು ಪಾಲಿಕೆ, ನಗರ ಯೋಜನೆಯ 10–15 ಸದಸ್ಯರು ದೆಹಲಿಗೆ ಭೇಟಿ ನೀಡುತ್ತಿದ್ದೇವೆ. ನಮ್ಮಲ್ಲಿ ಘನ ತ್ಯಾಜ್ಯ ನಿರ್ವಹಣೆಯ ಸಮಸ್ಯೆ ಇದೆ. ಹೈದರಾಬಾದ್, ಚೆನ್ನೈಗೂ ಭೇಟಿ ಕೊಟ್ಟಿದ್ದೇನೆ. ಕೆಲವು ಪ್ರಸ್ತಾವಗಳು ಇವೆ. ದೆಹಲಿಯಲ್ಲಿ ಘನ ತ್ಯಾಜ್ಯ ನಿರ್ವಹಣೆಗೆ ಒಂದು ತಂತ್ರಜ್ಞಾನವನ್ನು ಬಳಸಲಾಗುತ್ತಿದೆ. ಅದರ ಬಗ್ಗೆ ತಿಳಿಯಲು ನಮ್ಮ ತಂಡವನ್ನು ಅವರು ಆಹ್ವಾನಿಸಿದ್ದಾರೆ. ಹಾಗಾಗಿ, ನಾವು ತೆರಳುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.