ADVERTISEMENT

ಇಂದಿನಿಂದ ಹೊಸ ಸಿಎಸ್ ರಜನೀಶ್ ಗೋಯಲ್ ಕಾರ್ಯಾರಂಭ

ಮುಖ್ಯಕಾರ್ಯದರ್ಶಿಯಾಗಿದ್ದ ವಂದಿತಾ ಶರ್ಮಾ ಅವರ ಅವಧಿ ನವೆಂಬರ್ 30ಕ್ಕೆ ಕೊನೆಗೊಂಡಿತು.

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 1 ಡಿಸೆಂಬರ್ 2023, 7:54 IST
Last Updated 1 ಡಿಸೆಂಬರ್ 2023, 7:54 IST
<div class="paragraphs"><p>ಸಿಎಂ ಸಿದ್ದರಾಮಯ್ಯ ಅವರು ರಜನೀಶ್ ಗೋಯಲ್ ಅವರಿಗೆ ಶುಭ ಹಾರೈಸಿದ್ದಾರೆ.</p></div>

ಸಿಎಂ ಸಿದ್ದರಾಮಯ್ಯ ಅವರು ರಜನೀಶ್ ಗೋಯಲ್ ಅವರಿಗೆ ಶುಭ ಹಾರೈಸಿದ್ದಾರೆ.

   

ಬೆಂಗಳೂರು: ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ರಜನೀಶ್‌ ಗೋಯಲ್ ಅವರು ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ನೇಮಕವಾಗಿದ್ದು ಸಿಎಂ ಸಿದ್ದರಾಮಯ್ಯ ಅವರು ರಜನೀಶ್ ಗೋಯಲ್ ಅವರಿಗೆ ಶುಭ ಹಾರೈಸಿದ್ದಾರೆ.

ಈ ಕುರಿತು X ತಾಣದಲ್ಲಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ಕರ್ನಾಟಕ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಗಳಾಗಿ ನೇಮಕಗೊಂಡ ಹಿರಿಯ ಐಎಎಸ್ ಅಧಿಕಾರಿ ರಜನೀಶ್ ಗೋಯಲ್ ಅವರಿಗೆ ಅಭಿನಂದನೆಗಳು ಎಂದು ಶುಭ ಹಾರೈಸಿದ್ದಾರೆ.

ADVERTISEMENT

ಮುಖ್ಯಕಾರ್ಯದರ್ಶಿಯಾಗಿದ್ದ ವಂದಿತಾ ಶರ್ಮಾ ಅವರ ಅವಧಿ ನವೆಂಬರ್ 30ಕ್ಕೆ ಕೊನೆಗೊಂಡಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಗೋಯಲ್‌ ಅವರು ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ರಜನೀಶ್‌ ಅವರು ಸೇವಾ ಜ್ಯೇಷ್ಠತೆ ಆಧಾರದಲ್ಲಿ ಈ ಹುದ್ದೆಗೆ ನಿಯೋಜಿತಗೊಂಡಿದ್ದಾರೆ. 1986ರ ಬ್ಯಾಚ್‌ನ ಇವರ ಅಧಿಕಾರ ಅವಧಿ ಕೇವಲ ಏಳು ತಿಂಗಳು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.