ADVERTISEMENT

ಚಾಮರಾಜನಗರಕ್ಕೆ ಸಿ.ಎಂ ಭೇಟಿ ಖಚಿತ: ಎಸ್‌.ಟಿ.ಸೋಮಶೇಖರ್‌

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2021, 17:02 IST
Last Updated 1 ಅಕ್ಟೋಬರ್ 2021, 17:02 IST
ಎಸ್.ಟಿ.ಸೋಮಶೇಖರ್
ಎಸ್.ಟಿ.ಸೋಮಶೇಖರ್   

ಮೈಸೂರು: ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಮರಾಜನಗರಕ್ಕೆ ಹೋಗುವುದು ಖಚಿತ. ಅ. 6ರಂದೇ ಮೈಸೂರಿಗೆ ಬರುವ ಅವರು ರಾಷ್ಟ್ರಪತಿಗಳನ್ನು ವಿಮಾನನಿಲ್ದಾಣದಲ್ಲಿ ಸ್ವಾಗತಿಸಿ ಚಾಮರಾಜನಗರಕ್ಕೆ ತೆರಳು
ತ್ತಾರೆ’ ಎಂದು ಸಚಿವ ಎಸ್‌.ಟಿ.ಸೋಮಶೇಖರ್‌ ತಿಳಿಸಿದರು.

‘ದಸರಾ ಉದ್ಘಾಟನೆಗೆ 500 ಹಾಗೂ ಜಂಬೂಸವಾರಿಗೆ 1 ಸಾವಿರ ಮಂದಿ ಭಾಗವಹಿಸಬಹುದು ಎಂದು ತಜ್ಞರ ಸಮಿತಿ ಹೇಳಿದೆ. ಸಂಖ್ಯೆಯನ್ನು ಇನ್ನಷ್ಟು ಹೆಚ್ಚಿಸಬೇಕು ಎಂದು ಕೇಳಿದ್ದೇನೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಬಳಿಕ ಅವರು ಇಲ್ಲಿನ ಅರಮನೆಯ ಆವರಣದಲ್ಲಿ ದಸರಾ ಗಜಪಡೆಯ ಮಾವುತರು ಹಾಗೂ ಕಾವಾಡಿಗಳಿಗೆ ಉಪಾಹಾರ ಬಡಿಸಿದರು. ತಾವೂ ಅವರೊಂದಿಗೆ ಕುಳಿತು ಉಪಾಹಾರ ಸವಿದರು. ಅರಮನೆ ಮಂಡಳಿ ಕಚೇರಿಯಲ್ಲಿ ದಸರಾ ವೆಬ್‌ಸೈಟ್‌ಗೆ ಚಾಲನೆ ನೀಡಿದರು. ‘ವೆಬ್‌ಸೈಟ್, ಯೂಟ್ಯೂಬ್, ಫೇಸ್‌ಬುಕ್‌ನಲ್ಲಿ ದಸರಾ ಕಾರ್ಯಕ್ರಮಗಳು ನೇರ ಪ್ರಸಾರವಾಗಲಿವೆ’ ಎಂದು ಸೋಮಶೇಖರ್‌ ಅವರು ಮಾಹಿತಿ ನೀಡಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.