ADVERTISEMENT

ಸುತ್ತೂರು ಮಠಕ್ಕೆ ಸಿಎಂ ಭೇಟಿ, ಬನ್ನಿ ಮರಕ್ಕೆ ಪೂಜೆ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2022, 15:31 IST
Last Updated 5 ಅಕ್ಟೋಬರ್ 2022, 15:31 IST
ಮೈಸೂರಿನಲ್ಲಿ ಸುತ್ತೂರು ಮಠಕ್ಕೆ ಬುಧವಾರ ಭೇಟಿ ನೀಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಂಪತಿಯನ್ನು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಆಶೀರ್ವದಿಸಿದರು
ಮೈಸೂರಿನಲ್ಲಿ ಸುತ್ತೂರು ಮಠಕ್ಕೆ ಬುಧವಾರ ಭೇಟಿ ನೀಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಂಪತಿಯನ್ನು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಆಶೀರ್ವದಿಸಿದರು   

ಮೈಸೂರು: ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಇಲ್ಲಿನ ಚಾಮುಂಡಿ ಬೆಟ್ಟದ ಪಾದದಲ್ಲಿರುವ ಸುತ್ತೂರು ಮಠಕ್ಕೆ ಬುಧವಾರ ಭೇಟಿ ನೀಡಿ, ಅಲ್ಲಿನ ಬನ್ನಿ ಮರಕ್ಕೆ ಪೂಜೆ ಸಲ್ಲಿಸಿದರು.

ಮಂಗಳವಾರ ಸಂಜೆಯೇ ಪತ್ನಿ ಚನ್ನಮ್ಮ ಅವರೊಂದಿಗೆ ನಗರಕ್ಕೆ ಬಂದು ವಾಸ್ತವ್ಯ ಹೂಡಿದ್ದ ಮುಖ್ಯಮಂತ್ರಿ, ಬುಧವಾರ ವಿಜಯದಶಮಿಯ ಅಂಗವಾಗಿ ಸುತ್ತೂರು ಶಾಖಾ ಮಠದ ಆವರಣದಲ್ಲಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಪೂಜೆ ಸಲ್ಲಿಸಿದರು. ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಭೇಟಿಯಾಗಿ ಆಶೀರ್ವಾದ ಪಡೆದರು. ಕೆಲ ಹೊತ್ತು ಅನೌಪಚಾರಿಕವಾಗಿ ಮಾತುಕತೆ ನಡೆಸಿದರು. ಅವರನ್ನು ಶ್ರೀಗಳು ಸನ್ಮಾನಿಸಿದರು.

ಇದಕ್ಕೂ ಮುನ್ನ ಮುಖ್ಯಮಂತ್ರಿಗೆ ಮಠದವರು ಅದ್ಧೂರಿ ಸ್ವಾಗತ ನೀಡಿದರು. ಸಾಂಪ್ರದಾಯಕವಾಗಿ ಅವರನ್ನು ಕಲಾ ತಂಡಗಳ ಮೆರವಣಿಗೆಯಲ್ಲಿ ಬರ ಮಾಡಿಕೊಂಡರು.

ADVERTISEMENT

ಸಚಿವರಾದ ಎಸ್.ಟಿ.ಸೋಮಶೇಖರ್, ಬಿ.ಸಿ.ಪಾಟೀಲ, ವಿ.ಸುನೀಲ್‌ಕುಮಾರ್, ಶಾಸಕರಾದ ಜಿ.ಟಿ.ದೇವೇಗೌಡ, ಎಸ್.ಎ.ರಾಮದಾಸ್, ಎಲ್.ನಾಗೇಂದ್ರ, ಎನ್.ಮಹೇಶ್, ಸಿ.ಎಸ್.ನಿರಂಜನಕುಮಾರ್, ಎಂ.ಅಶ್ವಿನ್‌ಕುಮಾರ್, ಬಿ.ಹರ್ಷವರ್ಧನ, ಮೇಯರ್ ಶಿವಕುಮಾರ್, ಉಪ ಮೇಯರ್ ಡಾ.ಜಿ.ರೂಪಾ ಯೋಗೇಶ್, ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಉಪಾಧ್ಯಕ್ಷ ಎಂ.ರಾಜೇಂದ್ರ, ನಿಗಮ–ಮಂಡಳಿಗಳ ಅಧ್ಯಕ್ಷರಾದ ಕೋಟೆ ಎಂ.ಶಿವಣ್ಣ, ರಘು ಆರ್.ಕೌಟಿಲ್ಯ, ಮಿರ್ಲೆ ಶ್ರೀನಿವಾಸಗೌಡ, ಎಂ.ಶಿವಕುಮಾರ್, ಮುಖಂಡ ಎಚ್.ವಿ.ರಾಜೀವ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.