ADVERTISEMENT

ಯಾರೂ ಭಯಪಡಬೇಡಿ, ಆರೋಗ್ಯವಾಗಿದ್ದೇನೆ: ಸಿಎಂ ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 10 ಜುಲೈ 2020, 8:46 IST
Last Updated 10 ಜುಲೈ 2020, 8:46 IST
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ   

ಬೆಂಗಳೂರು: ಗೃಹ ಕಚೇರಿ ಕೃಷ್ಣಾದಲ್ಲಿ ಕೆಲ ಸಿಬ್ಬಂದಿಗೆ ಕೋವಿಡ್ ಪಾಸಿಟಿವ್ ಬಂದಿರುವ ಕಾರಣ ಇಂದಿನಿಂದ ಕೆಲ ದಿನಗಳ ಕಾಲ ಮನೆಯಿಂದಲೇ ನನ್ನ ಕರ್ತವ್ಯಗಳನ್ನು ನಿರ್ವಹಿಸಲಿದ್ದೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವೀಡಿಯೋ ಕಾನ್ಫರೆನ್ಸ್ ‌ಮುಖಾಂತರ ಅಗತ್ಯ ಸಲಹೆ ಸೂಚನೆಗಳನ್ನು ನೀಡಲಿದ್ದೇನೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ ಆರೋಗ್ಯವಾಗಿದ್ದೇನೆ. ಎಲ್ಲರೂ ಮುನ್ನೆಚ್ಚರಿಕೆಯ ಕ್ರಮಗಳು ಹಾಗೂ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಿ. ಸಾಮಾಜಿಕ ಅಂತರ ಹಾಗು ಕಡ್ಡಾಯವಾಗಿ ಮಾಸ್ಕ್ ಧರಿಸಿ ಕೋವಿಡ್ ನಿಯಂತ್ರಣಕ್ಕೆ ಸಹಕರಿಸಿ ಎಂದು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT