ADVERTISEMENT

ಬೆಂಗಳೂರು ತಂತ್ರಜ್ಞಾನ ಶೃಂಗ: ಮೊದಲ ದಿನವೇ ಭರ್ಜರಿ ಸ್ಪಂದನೆ

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2021, 16:21 IST
Last Updated 17 ನವೆಂಬರ್ 2021, 16:21 IST
ಬೆಂಗಳೂರು ತಂತ್ರಜ್ಞಾನ ಶೃಂಗಕ್ಕೆ ಚಾಲನೆ (ಟ್ವಿಟರ್‌ ಚಿತ್ರ)
ಬೆಂಗಳೂರು ತಂತ್ರಜ್ಞಾನ ಶೃಂಗಕ್ಕೆ ಚಾಲನೆ (ಟ್ವಿಟರ್‌ ಚಿತ್ರ)   

ಬೆಂಗಳೂರು: 24ನೇ ವರ್ಷದ ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯ ಮೊದಲ ದಿನವೇ 25 ಸಾವಿರ ಜನರು ಆನ್‌ಲೈನ್ ನೋಂದಣಿ ಮಾಡಿಸಿಕೊಂಡಿದ್ದು, ಸಮಾವೇಶಕ್ಕೆ ಭರ್ಜರಿ ಯಶಸ್ಸು ಸಿಕ್ಕಿದೆ ಎಂದು ಐಟಿ-ಬಿಟಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಹೇಳಿದರು.

ಇದು ಹಿಂದಿನ ವರ್ಷಗಳ ದಾಖಲೆಗಳನ್ನು ಮೀರಿದೆ. ಈ ಮೂಲಕ ಬಿಟಿಎಸ್ ಶೃಂಗವು ವರ್ಷದಿಂದ ವರ್ಷಕ್ಕೆ ಹೆಚ್ಚು ಜನರಿಗೆ ತಲುಪುತ್ತಿರುವುದು ಸಾಬೀತಾಗಿದೆ. ಜೊತೆಗೆ ಜನಸಾಮಾನ್ಯರಲ್ಲಿ ಕೂಡ ತಂತ್ರಜ್ಞಾನ, ಸಂಶೋಧನೆ, ನಾವೀನ್ಯತೆ ಮುಂತಾದ ವಿಚಾರಗಳ ಬಗ್ಗೆ ಆಸಕ್ತಿ ಹೆಚ್ಚುತ್ತಿರುವ ನಾಡಿಮಿಡಿತ ಕೂಡ ದೃಢಪಟ್ಟಿದೆ ಎಂದು ಹೇಳಿದರು.

ಕೊರೊನಾ ಹಿನ್ನೆಲೆಯಲ್ಲಿ ಹೋದ ವರ್ಷ ಮೊದಲ ಬಾರಿಗೆ ಈ ಶೃಂಗವನ್ನು ವರ್ಚುಯಲ್ ರೂಪದಲ್ಲಿ ನಡೆಸಲಾಗಿತ್ತು. ಆಗ ಒಟ್ಟು ಮೂರು ದಿನಗಳ ಅವಧಿಯಲ್ಲಿ 19 ಸಾವಿರ ಜನರು ನೋಂದಣಿ ಮಾಡಿಸಿಕೊಂಡಿದ್ದರು. ಅದಕ್ಕೂ ಮುನ್ನಾ ವರ್ಷ ಮೂರು ದಿನಗಳ ಅವಧಿಯಲ್ಲಿ 3 ಸಾವಿರ ಜನರು ಮಾತ್ರ ಬೆಂಗಳೂರು ತಾಂತ್ರಿಕ ಶೃಂಗವನ್ನು ಆನ್‌ಲೈನ್ ಮೂಲಕ ನೋಂದಣಿ ಮಾಡಿಸಿಕೊಂಡು ವೀಕ್ಷಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ADVERTISEMENT

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.