ನವದೆಹಲಿ: ಚನ್ನಪಟ್ಟಣ ಬೊಂಬೆಗಳನ್ನು ಉತ್ತೇಜಿಸಲು ಬೆಂಗಳೂರು– ಮೈಸೂರು ಎಕ್ಸ್‌ಪ್ರೆಸ್ ಕಾರಿಡಾರ್‌ನಲ್ಲಿ ಟಾಯ್ಸ್ ಪಾರ್ಕ್ ನಿರ್ಮಿಸಿ ಸ್ಥಳೀಯ ಬೊಂಬೆ ತಯಾರಿಕರಿಗೆ ಉತ್ತೇಜನ ನೀಡಬೇಕು ಎಂದು ಕೇಂದ್ರ ಭೂಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆಂಗಳೂರು ಗ್ರಾಮಾಂತರ ಸಂಸದ ಡಾ.ಸಿ.ಎನ್.ಮಂಜುನಾಥ್ ಮನವಿ ಮಾಡಿದರು.
ಬುಧವಾರ ಇಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಅವರು, ‘ಸಾವಿರಾರು ಕುಟುಂಬಗಳು ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಬೊಂಬೆ ಉದ್ಯಮದ ಮೇಲೆ ಅವಲಂಬಿತವಾಗಿವೆ. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಕಾರಿಡಾರ್ ನಿರ್ಮಾಣದ ನಂತರ ಚನ್ನಪಟ್ಟಣಕ್ಕೆ ಬರುವವರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ. ಇದರಿಂದಾಗಿ ಈ ಉದ್ಯಮದ ಮೇಲೆ ಅವಲಂಬಿತರಾಗಿರುವವರ ಸ್ಥಿತಿ ಶೋಚನೀಯವಾಗಿದೆ. ಟಾಯ್ಸ್ ಪಾರ್ಕ್ ನಿರ್ಮಿಸಿದರೆ ಬೊಂಬೆ ತಯಾರಕರಿಗೆ ಅನುಕೂಲವಾಗಲಿದೆ’ ಎಂದರು. ಈ ಬಗ್ಗೆ ಶೀಘ್ರ ಕ್ರಮ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.