ADVERTISEMENT

‘ಉಪನ್ಯಾಸಕ’ ಪೊಲೀಸರಿಗೆ ಎಚ್ಚರಿಕೆ

ಖಾಸಗಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರಗಳಿಗೆ ಹೋದರೆ ಶಿಸ್ತುಕ್ರಮ; ಸುತ್ತೋಲೆ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2019, 19:28 IST
Last Updated 21 ಫೆಬ್ರುವರಿ 2019, 19:28 IST

ಬೆಂಗಳೂರು: ಖಾಸಗಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರಗಳಲ್ಲಿ (ಕೋಚಿಂಗ್ ಸೆಂಟರ್) ಉಪನ್ಯಾಸ ನೀಡಲು ಹೋಗುತ್ತಿರುವ ಪೊಲೀಸರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅದಕ್ಕೆ ಕಡಿವಾಣ ಹಾಕಲು ಮುಂದಾಗಿರುವ ಡಿಜಿಪಿ ನೀಲಮಣಿ ರಾಜು ಹೊಸದೊಂದು ಸುತ್ತೋಲೆ ಹೊರಡಿಸಿದ್ದಾರೆ.

‘ರಾಜ್ಯದ ಹಲವು ಪೊಲೀಸರು, ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರಗಳ ಅಭ್ಯರ್ಥಿಗಳಿಗೆ ಉಪನ್ಯಾಸ ನೀಡಲು ಹೋಗುತ್ತಿರುವುದು ಕಂಡು ಬಂದಿದೆ. ಇನ್ನು ಮುಂದೆ ಆ ರೀತಿ ಕೇಂದ್ರಗಳಿಗೆ ಹೋಗಿದ್ದು ಕಂಡು ಬಂದರೆ, ಶಿಸ್ತುಕ್ರಮ ಕೈಗೊಳ್ಳಲಾಗುವುದು’ ಎಂದು ಸುತ್ತೋಲೆಯಲ್ಲಿ ಡಿಜಿಪಿ ಎಚ್ಚರಿಕೆ ನೀಡಿದ್ದಾರೆ.

‘ನೇಮಕಾತಿ ಪ್ರಕ್ರಿಯೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಪೊಲೀಸ್ ಇಲಾಖೆಯೇ ನಡೆಸುತ್ತಿದೆ. ಇಂಥ ಸಂದರ್ಭದಲ್ಲಿ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ, ಖಾಸಗಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರಗಳಿಗೆ ಹೋಗಿ ಉಪನ್ಯಾಸ ನೀಡುವುದು ಸೂಕ್ತವೆನಿಸುವುದಿಲ್ಲ. ಇಂಥ ವರ್ತನೆಯಿಂದ ಪೊಲೀಸ್ ಇಲಾಖೆ ನೇಮಕಾತಿಯ ಬಗ್ಗೆ ಜನರಲ್ಲಿ ಅನುಮಾನ ಮೂಡುತ್ತದೆ’ ಎಂದು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.