ADVERTISEMENT

ಹೊರದೇಶಗಳಿಂದ ಕಲ್ಲಿದ್ದಲು ಆಮದು; ಡಿಕೆಶಿ

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2018, 10:46 IST
Last Updated 23 ನವೆಂಬರ್ 2018, 10:46 IST
ಡಿ.ಕೆ. ಶಿವಕುಮಾರ್‌
ಡಿ.ಕೆ. ಶಿವಕುಮಾರ್‌   

ಬೆಳಗಾವಿ: ಭರವಸೆ ನೀಡಿದಂತೆ ಕೇಂದ್ರ ಸರ್ಕಾರವು ಕಲ್ಲಿದ್ದಲು ಪೂರೈಸದಿರುವುದರಿಂದ ರಾಜ್ಯದಲ್ಲಿ ಕೊರತೆ ತಲೆದೋರಿದೆ. ಅನಿವಾರ್ಯವಾಗಿ ಹೊರದೇಶಗಳಿಂದ ಕಲ್ಲಿದ್ದಲು ತರಿಸಿಕೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ. ಅದಕ್ಕಾಗಿ ಜಾಗತಿಕ ಮಟ್ಟದಲ್ಲಿ ಟೆಂಡರ್‌ ಆಹ್ವಾನಿಸಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌ ತಿಳಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಲ್ಲಿದ್ದಲು ಕೊರತೆಯಿಂದಾಗಿ ವಿದ್ಯುತ್‌ ಉತ್ಪಾದನೆ ಕುಂಠಿತವಾಗಿದೆ. ಡಿಸೆಂಬರ್‌ ವೇಳೆಗೆ ರಾಜ್ಯದಲ್ಲಿ ವಿದ್ಯುತ್‌ ಕೊರತೆ ಉಂಟಾಗಬಹುದು ಎನ್ನುವ ಆತಂಕವಿದೆ. ಈ ಸಮಸ್ಯೆಯನ್ನು ಬಗೆಹರಿಸಲು ಈಗಿನಿಂದಲೇ ತಯಾರಿ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.

ರಾಜ್ಯದ ಶೇ 40ರಷ್ಟು ರೈತರಿಗೆ ಸಬ್ಸಿಡಿ ದರದಲ್ಲಿ ವಿದ್ಯುತ್‌ ಪೂರೈಸಲಾಗುತ್ತಿದೆ. ಇದನ್ನು ರೈತರು ಅರ್ಥ ಮಾಡಿಕೊಳ್ಳಬೇಕು. ವಿದ್ಯುತ್‌ ಪೋಲಾಗದಂತೆ ನೋಡಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.