ADVERTISEMENT

ಕರಾವಳಿ, ಪಶ್ಚಿಮಘಟ್ಟಗಳಲ್ಲಿ ಮಳೆ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2019, 20:00 IST
Last Updated 11 ಆಗಸ್ಟ್ 2019, 20:00 IST
   

ಬೆಂಗಳೂರು: ರಾಜ್ಯದ ಕರಾವಳಿ ಭಾಗ ಹಾಗೂ ಪಶ್ಚಿಮ ಘಟ್ಟಗಳಲ್ಲಿ ಆ. 12 ಮತ್ತು 13ರಂದು ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಭಾಗದಲ್ಲಿ ಪಶ್ಚಿಮ ಹಾಗೂ ನೈರುತ್ಯ ದಿಕ್ಕಿನಿಂದ ಗಂಟೆಗೆ 45ರಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, 3.5ರಿಂದ 3.9 ಮೀಟರ್‌ನಷ್ಟು ಎತ್ತರದ ಅಲೆಗಳೂ ಏಳುತ್ತಿವೆ. ಹೀಗಾಗಿ ಮೀನುಗಾರರು ಕಡಲಿಗೆ ಇಳಿಯಬಾರದು ಎಂದು ಇಲಾಖೆ ಎಚ್ಚರಿಸಿದೆ.

ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಮುಂದಿನ 48 ಗಂಟೆ ಅವಧಿಯಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ. ಗರಿಷ್ಠ ತಾಪಮಾನ 27, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ADVERTISEMENT

ಭಾನುವಾರ ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯದಲ್ಲಿ 17 ಸೆಂ.ಮೀ ಮಳೆಯಾಗಿದೆ. ಕೊಪ್ಪ 16, ಕೊಲ್ಲೂರು 15, ಭಟ್ಕಳ 13, ಮೂಡುಬಿದರೆ 11, ಪುತ್ತೂರು, ಸುಳ್ಯ, ಮಡಿಕೇರಿ, ಶೃಂಗೇರಿಗಳಲ್ಲಿ ತಲಾ 10, ಧರ್ಮಸ್ಥಳ 9, ಉಪ್ಪಿನಂಗಡಿ 8, ಮೂಡಿಗೆರೆಯಲ್ಲಿ 7 ಸೆಂ.ಮೀ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.