ADVERTISEMENT

ಕರಾವಳಿ: ಸೆ.4ರವರೆಗೆ ವ್ಯಾಪಕ ಮಳೆ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 30 ಆಗಸ್ಟ್ 2019, 20:00 IST
Last Updated 30 ಆಗಸ್ಟ್ 2019, 20:00 IST
   

ಬೆಂಗಳೂರು: ‘ರಾಜ್ಯದ ಕರಾವಳಿ ಭಾಗದಲ್ಲಿ ಆಗಸ್ಟ್‌ 30ರಿಂದ ಸೆಪ್ಟೆಂಬರ್‌ 4ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ’ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್‌.ಪಾಟೀಲ ‘ಪ್ರಜಾವಾಣಿ’ಗೆ ತಿಳಿಸಿದರು.

‘ಶನಿವಾರದಿಂದ ಐದು ದಿನಗಳವರೆಗೆ ದಕ್ಷಿಣ ಒಳನಾಡಿನ ಹಲವೆಡೆ ಹಾಗೂ ಉತ್ತರ ಒಳನಾಡಿನ ಬಹುತೇಕ ಪ್ರದೇಶಗಳಲ್ಲಿ ಸಾಧ್ಯತೆ ಇದೆ’ ಎಂದರು.

ಶುಕ್ರವಾರ ಉತ್ತರ ಕನ್ನಡ ಜಿಲ್ಲೆಯ ಮಂಕಿಯಲ್ಲಿ 13 ಸೆಂ.ಮೀ.ಮಳೆಯಾಗಿದೆ. ಗೋಕರ್ಣ 11, ಅಂಕೋಲಾ 9, ಕುಂದಾಪುರ 8, ಸುಬ್ರಹ್ಮಣ್ಯ, ಸಿದ್ದಾಪುರ ಹಾಗೂ ಹೊನ್ನಾವರದಲ್ಲಿ ತಲಾ 7 ಸೆಂ.ಮೀ.ಮಳೆಯಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.