ಬೆಂಗಳೂರು: ತೆಂಗು ಸಂಶೋಧನೆ, ಕೀಟ ನಿವಾರಣೆ ಮತ್ತು ಮೌಲ್ಯವರ್ಧನೆಗಾಗಿ ತುಮಕೂರಿನಲ್ಲಿ ಉತ್ಕೃಷ್ಟತಾ ಕೇಂದ್ರ ಆರಂಭಿಸುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತದೆ ಎಂದು ಕೇಂದ್ರ ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.
ತೆಂಗು ಬೆಳೆಯಲ್ಲಿ ಕೀಟ ಮತ್ತು ರೋಗ ಸಮಸ್ಯೆಗಳ ಕುರಿತು ತೆಂಗು ಅಭಿವೃದ್ಧಿ ಮಂಡಳಿ, ತೋಟಗಾರಿಕಾ ಇಲಾಖೆ, ಕೃಷಿ ವಿಜ್ಞಾನ ಕೇಂದ್ರ, ತೋಟಗಾರಿಕಾ ವಿಶ್ವವಿದ್ಯಾಲಯಗಳ ಅಧಿಕಾರಿಗಳ ಜತೆ ಅವರು ಶುಕ್ರವಾರ ಸಭೆ ನಡೆಸಿದರು. ಬೆಂಗಳೂರು ಗ್ರಾಮಾಂತರ ಸಂಸದ ಡಾ.ಸಿ.ಎನ್.ಮಂಜುನಾಥ್, ಹಾಸನ ಸಂಸದ ಶ್ರೇಯಸ್ ಪಟೇಲ್ ಮತ್ತು ತಿಪಟೂರು ಶಾಸಕ ಷಡಕ್ಷರಿ ಅವರು ಸಭೆಯಲ್ಲಿ ಭಾಗಿಯಾಗಿದ್ದರು.
‘ಕೀಟ ಮತ್ತು ರೋಗ ಸಮಸ್ಯೆಗಳನ್ನು ತಡೆಗಟ್ಟುವ ಬಗ್ಗೆ, ಈ ಸಂಬಂಧ ಗ್ರಾಮ ಮಟ್ಟದಲ್ಲಿ ಸಭೆ ನಡೆಸುವ ಬಗ್ಗೆ ಚರ್ಚಿಸಲಾಯಿತು. ಈ ವೇಳೆ ತುಮಕೂರಿನಲ್ಲಿ ಉತ್ಕೃಷ್ಟತಾ ಕೇಂದ್ರ ಆರಂಭಿಸಬೇಕು ಎಂದು ಸಭೆಯಲ್ಲಿ ಪ್ರಸ್ತಾಪಿಸಲಾಯಿತು. ಈ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಿದ ಅವರು, ಪರಿಶೀಲನೆ ನಡೆಸುತ್ತೇನೆ’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.