ADVERTISEMENT

ಬೀದರ್‌, ಕಲಬುರಗಿಯಲ್ಲಿ ಶೀತಗಾಳಿ: ಹವಾಮಾನ ಇಲಾಖೆ ಮುನ್ಸೂಚನೆ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2025, 15:47 IST
Last Updated 22 ಡಿಸೆಂಬರ್ 2025, 15:47 IST
   

ಬೆಂಗಳೂರು: ಕಲಬುರಗಿ, ಬೀದರ್‌ ಜಿಲ್ಲೆಯಲ್ಲಿ ಮಂಗಳವಾರ (ಡಿ.23) ಶೀತಗಾಳಿ ಬೀಸುವ ಸಾಧ್ಯತೆ ಇದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಈ ವಾರ ಕನಿಷ್ಠ ಉಷ್ಣಾಂಶದಲ್ಲಿ 2–3 ಡಿಗ್ರಿ ಸೆಲ್ಸಿಯಸ್‌ನಷ್ಟು ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕರ್ನಾಟಕದ ಹಲವು ನಗರಗಳಲ್ಲಿ 3–4 ದಿನಗಳಿಂದ ತಾಪಮಾನದಲ್ಲಿ ಕುಸಿತ ಕಂಡು ಬಂದಿದೆ.

ಸೋಮವಾರ ಬೀದರ್‌ನಲ್ಲಿ ಕನಿಷ್ಠ ತಾಪಮಾನ 7.1 ಡಿಗ್ರಿ ಸೆಲ್ಸಿಯಸ್, ವಿಜಯಪುರ ಹಾಗೂ ದಾವಣಗೆರೆಯಲ್ಲಿ 10.5 ಡಿಗ್ರಿ ಸೆಲ್ಸಿಯಸ್‌, ಧಾರವಾಡದಲ್ಲಿ 10.6 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ. ಚಿಂತಾಮಣಿ, ಮೈಸೂರು, ಮಂಡ್ಯ, ಹಾಸನದಲ್ಲಿ ಕನಿಷ್ಠ ತಾಪಮಾನ 12 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ADVERTISEMENT

ಬೆಂಗಳೂರು ನಗರ ಹಾಗೂ ಸುತ್ತಮುತ್ತ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಮುಂಜಾನೆ ದಟ್ಟ ಮಂಜು ಕಂಡು ಬರುವ ಸಾಧ್ಯತೆಯಿದೆ. ಗರಿಷ್ಠ ಹಾಗೂ ಕನಿಷ್ಠ ತಾಪಮಾನ ಕ್ರಮವಾಗಿ 26 ಹಾಗೂ 16 ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.